ಸಿದ್ದರಾಮಯ್ಯ ಅನಿವಾರ್ಯ ಮಾಸ್ಟರ್​ಪ್ಲ್ಯಾನ್

Latest News

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

|ಶ್ರೀಕಾಂತ ಶೇಷಾದ್ರಿ

ಬೆಂಗಳೂರು: ರಾಜ್ಯ ರಾಜಕೀಯ ಮೇಲಾಟದಲ್ಲಿ ಪ್ರಯತ್ನಪಟ್ಟು ಸೋತಿದ್ದು ಬಿಜೆಪಿಯಾದರೆ, ಸರ್ಕಾರ ಉಳಿಸಿಕೊಂಡ ತೃಪ್ತಿ ಜೆಡಿಎಸ್​ನದ್ದು, ಆಂತರಿಕ ಬಿಕ್ಕಟ್ಟಿಗೆ ತೇಪೆ ಹಾಕಿಕೊಂಡು ನಿಟ್ಟುಸಿರುಬಿಟ್ಟಿದ್ದು ಕಾಂಗ್ರೆಸ್. ಇದರ ನಡುವೆ ಹೀರೋ ಆಗಿದ್ದು ಮತ್ತು ಇರುವಿಕೆಯ ಅನಿವಾರ್ಯತೆ ಸೃಷ್ಟಿಸಿಕೊಂಡಿದ್ದು ಮಾತ್ರ ಮಾಜಿ ಸಿಎಂ ಸಿದ್ದರಾಮಯ್ಯ.

2018ರ ವಿಧಾನಸಭೆ ಚುನಾವಣೆಯಲ್ಲಿ ಸ್ವಕ್ಷೇತ್ರದಲ್ಲಿ ಹೀನಾಯವಾಗಿ ಸೋತು, ಬಾದಾಮಿಯಲ್ಲಿ ಕೂದಲೆಳೆ ಅಂತರದಲ್ಲಿ ಗೆದ್ದು ಏದುಸಿರುಬಿಟ್ಟಿದ್ದ ಸಿದ್ದರಾಮಯ್ಯ ಈಗ ನಿಧಾನವಾಗಿ ಪಕ್ಷದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಪಕ್ಷದಲ್ಲಿ ಅನಿವಾರ್ಯತೆ ಏನೆಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಕೊಂಡೇ ಬರಲಾಂಭಿಸಿರುವುದಕ್ಕೆ ಅನೇಕ ನಿದರ್ಶನಗಳು ಕಾಣಿಸಲಾರಂಭಿಸಿವೆ.

ಹೆಬ್ಬಾಳ್ಕರ್- ಜಾರಕಿಹೊಳಿ ಸಹೋದರರ ಜಟಾಪಟಿ ಪ್ರಕರಣಕ್ಕೂ ಸಿದ್ದರಾಮಯ್ಯ ನಂಟಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಂತ್ರಿ ಸ್ಥಾನಕ್ಕೆ ಹತ್ತಿರವಾಗುತ್ತಿರುವ ವಿಚಾರ ಅರಗಿಸಿಕೊಳ್ಳಲಾಗದ ಜಾರಕಿಹೊಳಿ ಸಹೋದರರು ಅಸಮಾಧಾನ ಹೊರಹಾಕಲು ಸಮಯಕ್ಕಾಗಿ ಕಾಯುತ್ತಲೇ ಇದ್ದರು. ಸ್ಥಳೀಯ ಸಹಕಾರಿ ಬ್ಯಾಂಕ್ ಚುನಾವಣೆ ನೆಪದಲ್ಲಿ ಸ್ಪೋಟಗೊಂಡು ಸಮ್ಮಿಶ್ರ ಸರ್ಕಾರದಲ್ಲೇ ನಡುಕ ಹುಟ್ಟಿಸಿದ್ದರು.

ಏನಿದು ಲೆಕ್ಕಾಚಾರ: ಸಿದ್ದರಾಮಯ್ಯ ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿದ್ದು ಕಾಕತಾಳಿಯ ಎನ್ನುವಂತಿಲ್ಲ ಎಂದು ಮೂಲ ಕಾಂಗ್ರೆಸಿಗರೇ ಅಭಿಪ್ರಾಯಪಡುತ್ತಾರೆ. ಇದೊಂದು ಪೂರ್ವ ನಿಯೋಜಿತ ಎಂಬಂತೆ ಕಾಣಿಸುತ್ತಿದೆ. ಈ ಸಮಸ್ಯೆ ಬಗೆಹರಿಸುವ ಮೂಲಕ ಅವರ ಬಳಗದ ಮುಖಂಡರಿಗೆ ಪಕ್ಷದಲ್ಲಿ ಪ್ರಭಾವ ಹೆಚ್ಚಿಸುವುದು ಹಾಗೂ ವೈಯಕ್ತಿಕವಾಗಿ ಪಕ್ಷದಲ್ಲಿ ಅನಿವಾರ್ಯತೆ ತೋರಿಸಿಕೊಳ್ಳುವುದು ಸಿದ್ದರಾಮಯ್ಯ ಅವರ ರಾಜಕೀಯ ಲೆಕ್ಕಾಚಾರ ಎಂಬ ಮಾತಿದೆ. ಈ ಮೂಲಕ ಕಾಂಗ್ರೆಸ್ ಪದಾಧಿಕಾರಿ ಆಯ್ಕೆಯಲ್ಲೂ ತಮ್ಮದೇ ಅಭಿಪ್ರಾಯಕ್ಕೆ ಮನ್ನಣೆ ಸಿಗುವಂತೆ ನೋಡಿಕೊಳ್ಳುವ ತಂತ್ರವೂ ಇದೆ ಎನ್ನಲಾಗಿದೆ.

ದಿನದ ತೀರ್ಮಾನ: ವಿಧಾನ ಸಪರಿಷತ್​ನ 2 ಸ್ಥಾನಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಭಾನುವಾರದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ನಿವೇದಿತ ಆಳ್ವ, ರಾಮಚಂದ್ರಪ್ಪ, ಕೆ.ಇ.ರಾಧಾಕೃಷ್ಣ, ಬಿ.ಎಸ್.ಶಿವಣ್ಣ, ಚೆಲುವರಾಯಸ್ವಾಮಿ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿದ್ದು, ಇಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಇದೇ ರೀತಿ ಬಿಬಿಎಂಪಿ ಮೇಯರ್ ಆಯ್ಕೆ ಹಾಗೂ ಬೆಳಗಾವಿ ಜಗಳದ ಬಗ್ಗೆ ವಿಶೇಷ ಸಭೆ ನಡೆಯಲಿದೆ.

ರಾಜ್ಯ ಕಾಂಗ್ರೆಸ್ ವಾದ ಹೀಗಿದೆ

ಕಾಂಗ್ರೆಸ್​ನಲ್ಲಿ ಹೆಚ್ಚು ಪ್ರಭಾವ ಹೊಂದಿದ್ದ ಜಿ.ಪರಮೇಶ್ವರ್ ಉಪಮುಖ್ಯಮಂತ್ರಿ ಸ್ಥಾನ ಪಡೆಯುವ ಮೂಲಕ ಪಕ್ಷದ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್ ಅವರನ್ನು ಜಾರಕಿಹೊಳಿ ಪ್ರಕರಣದಲ್ಲಿ ಕಟ್ಟಿಹಾಕಿದ್ದಾಗಿದೆ. ಇನ್ನು ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಕಾರಣದಲ್ಲಿದ್ದಾರೆ. ಉಳಿದಂತೆ ದಿನೇಶ್ ಗುಂಡೂರಾವ್ ಅಧ್ಯಕ್ಷರಾದರೂ ಪ್ರಭಾವ ವ್ಯಾಪಿಸಿಲ್ಲ. ಬೆಂಗಳೂರಿನ ಕೈ ನಾಯಕರ್ಯಾರಿಗೂ ರಾಜ್ಯದ ನಾಯಕತ್ವ ತೆಕ್ಕೆಗೆ ತೆಗೆದುಕೊಳ್ಳಲು ಅವಕಾಶ ನೀಡಿಲ್ಲ. ಈ ಕಾರಣಗಳಿಂದ ಸದ್ಯಕ್ಕೆ ಸಿದ್ದರಾಮಯ್ಯ ಮಾತೇ ಅಂತಿಮ ಎಂಬ ಸ್ಥಿತಿ ನಿರ್ವಣವಾಗುತ್ತಿದೆ ಎಂಬ ವಾದವಿದೆ. ಜಾರಕಿಹೊಳಿ ಪ್ರಕರಣ ಅಂತ್ಯ ಕಾಣಿಸಲು ಸಿದ್ದರಾಮಯ್ಯ ನೇತೃತ್ವದಲ್ಲೇ ಭಾನುವಾರ ಅಥವಾ ಸೋಮವಾರ ಸಭೆ ನಡೆಯಲಿದ್ದು, ಇತ್ಯರ್ಥವಾದಲ್ಲಿ ಅವರಿಗೆ ಕ್ರೆಡಿಟ್ ಸಲ್ಲಲಿದೆ. ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೊಂದಲ ಪರಿಹರಿಸುವ ಛಾತಿ ಇದ್ದರೂ ಸಿದ್ದರಾಮಯ್ಯ ಬರುವಿಕೆವರೆಗೆ ಕಾದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....