More

    ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣ; ಜಿಲ್ಲಾ ಕಾಂಗ್ರೆಸ್ ಮೌನ ಸತ್ಯಾಗ್ರಹ

    ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಇಡೀ ದಿನ ನಗರದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಸತ್ಯಾಗ್ರಹ ನಡೆಸಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ ಎಂದು ಕಿಡಿಕಾರಿದರು.
    ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಟಾರ್ಗೆಟ್ ಮಾಡಿಕೊಂಡಿದ್ದು ಅವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತ್ಯವನ್ನು ಮುಚ್ಚಿ ಹಾಕುವ ಹುನ್ನಾರ ಮಾಡುತ್ತಿದೆ ಎಂದು ದೂರಿದರು.
    ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಪ್ರತಿಪಕ್ಷದಲ್ಲಿರುವಾಗ ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ಸಹಜ. ಆದರೆ ಹೆರಾಲ್ಡ್ ಪತ್ರಿಕೆ ವಿಚಾರವನ್ನೇ ನೆಪವಾಗಿಟ್ಟುಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಪಕ್ಷಗಳ ಮುಖಂಡರ ಮೇಲೆ ಇಡಿ ಮತ್ತು ಸಿಬಿಐ ದಾಳಿ ನಡೆಸುತ್ತಿದೆ. ಅವರು ಬಿಜೆಪಿ ಸೇರ್ಪಡೆಗೊಂಡ ಬಳಿಕ ಅವರ ಮೇಲಿನ ಪ್ರಕರಣಗಳಿಗೆ ಕ್ಲೀನ್‌ಚೀಟ್ ನೀಡುವ ಕೆಲಸ ಆಗುತ್ತಿದೆ. ಅವರ ಭ್ರಷ್ಟಾಚಾರಕ್ಕೆ ಜನರು ಈಗಾಗಲೇ ಯಾವ ರೀತಿ ಬೆಲೆ ಕೊಟ್ಟಿದ್ದಾರೆ ಎಂಬುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಲ್ಲರೂ ನೋಡಿದ್ದಾರೆ. ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬೇಕಾದ ಯಾವುದೇ ಕೆಲಸ ಮಾಡುತ್ತಿಲ್ಲ. ಅದಾನಿ, ಅಂಬಾನಿ ಅವರಂತಹ ಶ್ರೀಮಂತರಿಗೆ ನೆರವಾಗುತ್ತಿದೆ. ಹಾಗಾಗಿ ಶೋಷಿತ ವರ್ಗದವರೊಂದಿಗೆ ಸೇರಿ ಹೋರಾಟ ಮಾಡಲಾಗುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಅಲೆ ಬೀಸುತ್ತಿದೆ ಎಂದರು.

    ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ಪ್ರಧಾನ ಕಾರ್ಯದರ್ಶಿ ಸಿ.ಎಸ್.ಚಂದ್ರಭೂಪಾಲ್, ಮುಖಂಡರಾದ ಎಸ್.ಪಿ.ಶೇಷಾದ್ರಿ, ಜಿ.ಡಿ.ಮಂಜುನಾಥ, ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕಿ ರೇಖಾ ರಂಗನಾಥ, ಸದಸ್ಯರಾದ ಎಚ್.ಸಿ.ಯೋಗೇಶ್, ಯಮುನಾ ರಂಗೇಗೌಡ, ಮೇಹಖ್ ಷರೀಫ್, ಸೌಗಂಧಿಕಾ, ವಿನಾಯಕ ಮೂರ್ತಿ, ಎಚ್.ಎಂ.ಮಧು, ಚಂದನ್, ಚಂದ್ರಶೇಖರ್ ಕವಿತಾ, ಶಶಿಧರ್, ವೈ.ಬಿ.ಚಂದ್ರಕಾಂತ್, ಎಂ.ಎಸ್.ಸಿದ್ದಪ್ಪ, ಮಧುಸೂದನ್, ಸ್ಟೆಲ್ಲಾ ಮಾರ್ಟಿನ್, ನಾಜೀಮಾ, ಪ್ರೇಮಾ, ಪಾರ್ವತಿ, ಕವಿತಾ ರುದ್ರೇಶ್, ತಬಸ್ಸುಮ್, ಯು.ಶಿವಾನಂದ್ ಮತ್ತಿತರರು ಮೌನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts