ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ಎಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ ಎಂದು ಡಿಸಿಎಂ DK ಶಿವಕುಮಾರ್ ಪ್ರಶ್ನಿಸಿದರು.
ಇದನ್ನೂ ಓದಿ:ಸುನೀತಾ ವಿಲಿಯಮ್ಸ್ ಭಾರತದ ಹೆಮ್ಮೆಯ ಪುತ್ರಿ, ಆಕೆಗೆ ಭಾರತ ರತ್ನ ಕೊಡಿ ಎಂದ ಮಮತಾ ಬ್ಯಾನರ್ಜಿ! Sunita Williams
ವಿಧಾನಸೌಧದ ಗುರುವಾರ ಸುದ್ದಿಗಾರರ ಜತೆ ಮಾತಬನಾಡಿದರು. ಕೇತಗಾನಹಳ್ಳಿ ಜಮೀನು ಒತ್ತುವರಿ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವಾ? ಈ ವಿಚಾರವಾಗಿ ಎಸ್.ಆರ್ ಹಿರೇಮಠ್ ಅವರು ಪ್ರಕರಣ ದಾಖಲಿಸಿದ್ದಾರೆ. ನನ್ನ ಮೇಲೂ ಹಿರೇಮಠ್ ಅವರು ಅನೇಕ ಕೇಸ್ ದಾಖಲಿಸಿದ್ದರು. ಅವರ ಅರ್ಜಿ ಮೇರೆಗೆ ನ್ಯಾಯಾಲಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಅಧಿಕಾರಿಗಳು ಕೋರ್ಟ್ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣ ಏನಿದೆ?” ಎಂದರು.
ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ
“ನನ್ನ ವಿರುದ್ಧ ಮೈಸೂರಿನಲ್ಲಿ ಅವರು (ಕುಮಾರಸ್ವಾಮಿ) ಏನೆಲ್ಲಾ ಮಾತನಾಡಿದರು, ಅವರ ತಂದೆ ನನ್ನ ವಿರುದ್ಧ ಏನೆಲ್ಲಾ ಮಾತನಾಡಿದ್ದಾರೆ. ನನ್ನ ಮೇಲೆ, ನನ್ನ ಪತ್ನಿ, ನನ್ನ ತಂಗಿ ಹಾಗೂ ಸಹೋದರನ ಮೇಲೆ ಏನೆಲ್ಲಾ ಕೇಸ್ ಹಾಕಿದ್ದರು. ನನಗೂ ಬಳ್ಳಾರಿಗೂ ಸಂಬಂಧವಿಲ್ಲ ಆದರೂ ಅದಿರು ಕಳ್ಳತನ ಮಾಡಿದ್ದೇನೆ ಎಂದು ಆರೋಪ ಮಾಡಿರಲಿಲ್ಲವೇ. ನನ್ನ ಮೇಲೆ ತನಿಖೆ ಮಾಡಿಸಿಲ್ಲವೇ? ಅವರ ಜತೆ ಸರ್ಕಾರ ಮಾಡಿದ್ದೇವೆ ಎಂದು ನಾವು ಸುಮ್ಮನೆ ಇದ್ದೇವೆ. ಅವರು ಮರ್ಯಾದೆಯಾಗಿ ಇದ್ದರೆ ಕ್ಷೇಮ” ಎಂದು ಹರಿಹಾಯ್ದರು.
ಇದನ್ನೂ ಓದಿ:Karnataka Legislative Assembly Session | 20 ನಿಮಿಷ ಮಾತಾಡಿದ್ರೆ ಎಲ್ಲಿಂದ ಟೈಂ ಕೊಡೋದು?
ನಮ್ಮ ಜಿಲ್ಲೆಯ ಜನರಿಗೆ ಒಳ್ಳೆಯದು ಬಯಸೋದು ತಪ್ಪಾ?
ರಾಮನಗರ ಜಿಲ್ಲೆ ಮರುನಾಮಕರಣ ಮಾಡಬಾರದು ಎಂದು ಕೇಂದ್ರಕ್ಕೆ ಒತ್ತಡ ಹಾಕಿದ್ದಾರೆ. ನಮಗೂ ಕಾನೂನು ಗೊತ್ತಿದೆ. ಸಂವಿಧಾನದಲ್ಲಿ ನಾವು ಯಾರನ್ನೂ ಕೇಳುವ ಅಗತ್ಯವಿಲ್ಲ. ನಾವು ಮಾಹಿತಿ ನೀಡಬೇಕು ಎಂದು ಹೇಳಿ ಪ್ರಸ್ತಾವನೆ ಕಳುಹಿಸಿದ್ದೇವೆ. ದೆಹಲಿಯಲ್ಲಿರುವ ಕೆಲ ಮಂತ್ರಿಗಳು ಈ ವಿಚಾರದಲ್ಲಿ ಷಡ್ಯಂತ್ರ ನಡೆಸಿದ್ದಾರೆ. ನಾವು ಅದಕ್ಕೆಲ್ಲ ಜಗ್ಗುವುದಿಲ್ಲ. ಜಿಲ್ಲೆ ಮರುನಾಮಕರಣ ಮಾಡುವುದು ಹೇಗೆ, ಜಿಲ್ಲೆಯನ್ನು ಹೇಗೆ ಬದಲಾಯಿಸಬೇಕು ಎಂದು ಗೊತ್ತಿದೆ, ನಾವು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮಾಡುತ್ತೇವೆ ಎಂದು ತಿಳಿಸಿದರು.