More

    ಪ್ರಧಾನಿ ಮೋದಿ ವಿರುದ್ಧ ಅವಹೇಳನ; ಪ್ರಿಯಾಂಕ ಗಾಂಧಿ, ಅರವಿಂದ್​ ಕೇಜ್ರಿವಾಲ್​ಗೆ ಶೋಕಾಸ್​ ನೋಟಿಸ್

    ನವದೆಹಲಿ: ಯಾವುದೇ ಆಧಾರವಿಲ್ಲದೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಆಪಾದನೆ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಚುನಾವಣಾ ಆಯೋಗವು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಹಾಗೂ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿಗೆ ಶೋಕಾಸ್​ ನೋಟಿಸ್​ ಜಾರಿ ಮಾಡಿದೆ.

    ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಪ್ರಚಾರದ ವೇಳೆ ಪ್ರಧಾನಿ ಮೋದಿ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆಪಾದನೆ ಮಾಡಿರುವ ಕುರಿತು ನವೆಂಬರ್ 16ರ ರಾತ್ರಿ 8 ಘಂಟೆ ಒಳಗೆ ಉತ್ತರಿಸಬೇಕೆಂದು ನೋಟಿಸ್​ನಲ್ಲಿ ಸೂಚಿಸಲಾಗಿದೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್ 2023| ಯಾರಿಗೆ ಹೆಚ್ಚು ಸಹಕಾರಿಗಲಿದೆ ವಾಂಖೆಡೆ ಪಿಚ್; ನಿರ್ಣಾಯಕ ಪಾತ್ರ ವಹಿಸಲಿದೆ ಟಾಸ್

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಚುನಾವಣಾ ಆಯೋಗವು ಪ್ರಧಾನಿ ಮೋದಿ ವಿರುದ್ಧ ಅವಮಾನಕಾರಿ ಹಾಗೂ ಅವಹೇಳನಕಾರಿ ಪೋಸ್ಟ್​ಗಳನ್ನು ಹಂಚಿಕೊಂಡ ಆರೋಪದ ಮೇಲೆ ದೂರು ದಾಖಲಾಗಿದ್ದು, ಅಸ್ಪಷ್ಟ ಮತ್ತು ದುರುದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ.

    ಆಪಾದಿತ ವಿಚಾರವನ್ನು ಆಮ್​ ಆದ್ಮಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯಿಂದ ಪೋಸ್ಟ್​ ಮಾಡಲಾಗಿದ್ದು, ರಾಷ್ಟ್ರೀಯ ಪಕ್ಷವಾಗಿರುವ ಎಎಪಿ ಇಂತಹ ವಿಚಾರಗಳನ್ನು ಪ್ರಸ್ತಾಪಿಸುವ ಮೊದಲು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು, ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ರಾಷ್ಟ್ರೀಯ ಚುನಾವಣಾ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts