More

    ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

    ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ದಿನದಿಂದ ಹಿಡಿದು ಈವರೆಗೂ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 4,650 ಕೋಟಿ ರೂಪಾಯಿ ಮೌಲ್ಯದ ನಗದು, ನಾಣ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಭಾರತೀಯ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

    ಇದನ್ನೂ ಓದಿ: ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ ಹಠಾತ್ ಎದೆನೋವು

    ನೀತಿ ಸಂಹಿತೆ ಜಾರಿ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದೇಶಾದ್ಯಂತ ಚೆಕ್ ಪೋಸ್ಟ್‌ಗಳಲ್ಲಿ ಕಣ್ಗಾವಲು ವಹಿಸಿದ್ದು, ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿವೆ.

    75 ವರ್ಷಗಳ ಲೋಕಸಭೆ ಚುನಾವಣೆ ಇತಿಹಾಸದಲ್ಲೇ ಇಷ್ಟು ಹಣವನ್ನು ಇದೇ ಮೊದಲ ಬಾರಿಗೆ ವಶಪಡಿಸಿಕೊಳ್ಳಲಾಗಿದೆ. ಹಾಗೂ ಕಳೆದ 2019ರ ಸಂಪೂರ್ಣ ಲೋಕಸಭೆ ಚುನಾವಣೆಗಿಂತ 3475 ಕೋಟಿ ರೂ. ಹೆಚ್ಚು ಹಣವನ್ನು ಈ ಬಾರಿ ಸೀಜ್​ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
    ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಕ್ಕೂ ಮುನ್ನ ಅಂದರೆ ಮಾರ್ಚ್ 1 ರಿಂದ ಪ್ರತಿದಿನ ಸುಮಾರು 100 ಕೋಟಿ ರೂಪಾಯಿ ಸ್ವತ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಈ ಬಾರಿಯ ಚುನಾವಣೆಯಲ್ಲಿ ಈವರೆಗೆ 2,068.8 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ 2019ರ ಚುನಾವಣೆಯಲ್ಲಿ ಪಟ್ಟು 1,279.9 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆ ಆದ ಬಳಿಕ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಮಾದರಿ ನೀತಿ ಸಂಹಿತೆ ಅನ್ವಯ ಚೆಕ್ ಪೋಸ್ಟ್‌ ಸ್ಥಾಪನೆ ಸೇರಿದಂತೆ ಹಲವು ರೀತಿಯ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಈ ಪ್ರಕ್ರಿಯೆ ವೇಳೆ ಇಷ್ಟು ದೊಡ್ಡ ಪ್ರಮಾಣದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

    ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಏಪ್ರಿಲ್ 19ರಿಂದ ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮತದಾನ ನಡೆಯಲಿದೆ.

    ನಟ ಶಿವರಾಜ್​ಕುಮಾರ್​ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಆಸ್ತಿ ಮೌಲ್ಯ, ಸಾಲದ ಬಗ್ಗೆ ಇಲ್ಲಿದೆ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts