More

    ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ನೇಮಕ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್​ ಗೆಲುವಿನಲ್ಲಿ ಕನುಗೋಲು ಅವರು ಪ್ರಮುಖ ಪಾತ್ರವಹಿಸಿದ್ದಾರೆ.

    ಕನುಗೋಲು ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನಿನ್ನೆ (ಮೇ 31) ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕನುಗೋಲು ಅವರು ರಣತಂತ್ರ ಎಳೆದಿದ್ದರು.

    ಇದನ್ನೂ ಓದಿ: ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ; ವಿಜಯವಾಣಿ ಸಂವಾದದಲ್ಲಿ ಕೃಷಿ ಸಚಿವ ಭರವಸೆ

    ಯಾರು ಈ ಸನೀಲ್​ ಕನುಗೋಲು?

    2018ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಪರ ಚುನಾವಣಾ ತಂತ್ರಗಾರರಾಗಿ ಕೆಲಸ ಮಾಡಿದ್ದ ಸುನೀಲ್​ ಕನುಗೋಲು ಚುನಾವಣಾ ಚಾಣಕ್ಯ ಪ್ರಶಾಂತ್​ ಕಿಶೋರ್​ ತಂಡದಲ್ಲಿ ಇದ್ದರೂ ಎನ್ನುವುದು ವಿಶೇಷ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್​ಗೆ ಹತ್ತಿರವಾಗಿದ್ದ ಸುನೀಲ್,​ ರಾಹುಲ್​ ಗಾಂಧಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.

    ಚುನಾವಣಾ ತಂತ್ರಗಾರ ಸುನೀಲ್​ ಕನುಗೋಲು ಅವರ ತಂಡ ಕಾಂಗ್ರೆಸ್​ ಪಕ್ಷದ ಕೆಲವು ನಾಯಕರನ್ನು ಹೊರತುಪಡಿಸಿ ಮಿಕ್ಕೆಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ ಅದರ ವರದಿ ನೀಡಿತ್ತು. ಕಳೆದ ವರ್ಷ ಕಾಂಗ್ರೆಸ್​ ನಾಯಕರು ನಡೆಸಿದ್ದ ಚಿಂತನ ಶಿಬಿರದ ಬಳಿಕ ಸುನೀಲ್​ ಅವರನ್ನು ಸೋನಿಯಾ ಗಾಂಧಿ ಮುಂಬರುವ ರಾಜ್ಯ ವಿಧಾನಸಬೆ ಚುನಾವಣೆಗಳು ಹಾಗೂ ಲೋಕಸಭೆ ಚುನಾವಣೆಗೆ ತಂತ್ರಗಾರರನ್ನಾಗಿ ನೇಮಿಸಿದ್ದರು.

    ಇತ್ತೀಚಿನ ವರ್ಷಗಳಲ್ಲಿ ಸುನೀಲ್​ ಕನಗೋಲು ಮತ್ತು ಅವರ ತಂಡ ವಿವಿಧ ಪಕ್ಷಗಳ ಪರ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ. 2016ರಲ್ಲಿ ನಡೆದ ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಹಾಗೂ 2021ರಲ್ಲಿ ಡಿಎಂಕೆ ಪರ ತಂತ್ರಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಶಾಂತ್​ ಕಿಶೋರ್​ ಜೊತೆ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಸುನೀಲ್​ 2014ರಲ್ಲಿ ಬಿಜೆಪಿಯ ಪರ ಕೆಲಸ ಮಾಡಿದ್ದರು. ಬಿಜೆಪಿಯ ಬಿಲಿಯನ್​ ಮೈಂಡ್ಸ್​ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ಬಿಜೆಪಿ ಪರ ಕೆಲಸ ಮಾಡಿ ಪಕ್ಷ ಗೆಲುವಿನ ನಗೆ ಬೀರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

    ಇದನ್ನೂ ಓದಿ: ಪ್ರೇಯಸಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ : ಆರೋಪಿ ಬಂಧನಕ್ಕೆ ಪೊಲೀಸರ ಬಲೆ

    ಕರ್ನಾಟಕದ ಬಳ್ಳಾರಿ ಮೂಲದವರಾದ ಸುನೀಲ್​ ಬೆಳೆದಿದ್ದು ಚೆನ್ನೈನಲ್ಲಿ. ರಾಹುಲ್​ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು ನಡೆಸಿದ ಭಾರತ್​ ಜೋಡೋ ಯಾತ್ರೆಯ ರೂಪುರೇಷೆಯನ್ನು ಸಿದ್ದಪಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜನರೊಂದಿಗೆ ಸಂಪರ್ಕ ಸಾಧಿಸಲು ಯಾತ್ರೆ ಅನುಕೂಲ ಮಾಡಿದೆ ಮತ್ತು ಪಕ್ಷಕ್ಕೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಾಯ ಮಾಡಿದೆ. (ದಿಗ್ವಿಜಯ ನ್ಯೂಸ್​)

    ಹೊಂಬೆಳಕು ಅಂಕಣ | ನಮ್ಮ ಅಜ್ಞಾನದಿಂದ ಮಕ್ಕಳ ಭವಿಷ್ಯ ಹಾಳಾಗದಿರಲಿ!

    ಸಂಪಾದಕೀಯ | ರೈತಸ್ನೇಹಿ ಕ್ರಮ; ವಿಶ್ವದಲ್ಲೇ ಅತಿದೊಡ್ಡ ಧಾನ್ಯ ಸಂಗ್ರಹ ಸೌಲಭ್ಯ ಯೋಜನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts