ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತಗಟ್ಟೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಏ.23ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ತಮಗೆ ನೀಡಲಾದ ಸಾಮಗ್ರಿಗಳೊಂದಿಗೆ ಸೋಮವಾರ ಮತಗಟ್ಟೆಗಳಿಗೆ ತೆರಳಿದರು.
ದಾವಣಗೆರೆಯ ಮೋತಿ ವೀರಪ್ಪ ಕಾಲೇಜಿನಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಿಬ್ಬಂದಿಗೆ ಸೋಮವಾರ ಬೆಳಗ್ಗೆ ಸಾಮಗ್ರಿಗಳನ್ನು ವಿತರಿಸಲಾಯಿತು. ತರಳಬಾಳು ಶಾಲೆಯಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಸಿಬ್ಬಂದಿ ಚುನಾವಣಾ ಸಾಮಗ್ರಿಗಳನ್ನು ಪಡೆದುಕೊಂಡರು.
ಸಿಬ್ಬಂದಿಗಾಗಿ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಕೊಠಡಿಯೊಳಗೆ ಕೂಡಿಸಿ ಅವರಿಗೆ ಇವಿಎಂ, ವಿವಿ ಪ್ಯಾಟ್ ಸೇರಿ ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಒದಗಿಸಲಾಯಿತು. ತಮಗೆ ನೀಡಲಾದ ವಸ್ತುಗಳನ್ನು ಮತಗಟ್ಟೆ ಸಿಬ್ಬಂದಿ ಜೋಡಿಸಿಟ್ಟುಕೊಂಡರು.
ಮತ ಯಂತ್ರಗಳು ಸರಿಯಾಗಿ ಕೆಲಸ ಮಾಡುತ್ತಿವೆಯೆ ಎಂಬುದನ್ನು ಪರೀಕ್ಷಿಸಿಕೊಂಡಿದ್ದಲ್ಲದೆ, ಸೆಕ್ಟರ್​ ಅಧಿಕಾರಿಳ ಬಳಿ ತಮ್ಮ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮೋತಿ ವೀರಪ್ಪ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a Reply

Your email address will not be published. Required fields are marked *