More

    ಲೋಕಸಭೆ ಚುನಾವಣೆ 2024; ಕರ್ತವ್ಯನಿರತ ಮಹಿಳಾ ಅಧಿಕಾರಿ ಸಾವು

    ಚಿತ್ರದುರ್ಗ: 18ನೇ ಸಾರ್ವತಿಕ ಚುನಾವಣೆಗೆ ದೇಶಾದ್ಯಂತ ಇಂದು (ಏಪ್ರಿಲ್ 26) ಎರಡನೇ ಹಂತದ ಮತದಾನ ನಡೆಯುತ್ತಿದ್ದು, 13 ರಾಜ್ಯಗಳ 88 ಕ್ಷೇತ್ರಗಳಿಗೆ ವೊಟಿಂಗ್​ ನಡೆಯುತ್ತಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಇಂದು (ಏಪ್ರಿಲ್ 26) ಮತದಾನ ನಡೆಯುತ್ತಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.

    ಇನ್ನೂ ಚುನಾವಣಾ ಕರ್ತವ್ಯದ ವೇಳೆ ಮತಗಟ್ಟೆ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಶೋಧಮ್ಮ (58) ಎಂದು ಗುರುತಿಸಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಚುನಾವಣಾ ಅಧಿಕಾರಿ ಬಿ. ಆನಂದ್, ಯಶೋಧಮ್ಮನವರು ತರಬೇತಿ ವೇಳೆ ಆರೋಗ್ಯ ಸಮಸ್ಯೆ ಬಗ್ಗೆ ಹೇಳಿಕೊಂಡಿರಲಿಲ್ಲ. ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದಾರೆ. ದಿಢೀರನೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಬಿ. ಆನಂದ್ ತಿಳಿಸಿದ್ದಾರೆ.

    Yashodhamma

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts