More

    ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ನಾಳೆ ತರಬೇತಿ

    ದಾವಣಗೆರೆ: ಚುನಾವಣಾ ಕರ್ತವ್ಯಕ್ಕೆ ನೇಮಕವಾದ ದಾವಣಗೆರೆ ಜಿಲ್ಲೆಯ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ಏ.30 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

    ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದವರಿಗೆ ತರಬೇತಿ ಕೇಂದ್ರಗಳಲ್ಲಿ ಅಂಚೆ ಮತದಾನದ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕರ್ತವ್ಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಮೇ 1ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಹರಪನಹಳ್ಳಿ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತರಬೇತಿ ನಡೆಯಲಿದೆ.

    ಸ್ಮಾರ್ಟ್ ಸಿಟಿಯಲ್ಲಿ ಅಂಚೆ ಮತದಾನ:
    ನಮೂನೆ 12ಡಿ ರಡಿ ಘೋಷಣಾ ಪತ್ರ ನೀಡಿದ ಅಗತ್ಯ ಸೇವೆಗಳ 16 ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಜಿಲ್ಲಾಡಳಿತ ಭವನದ ಪಕ್ಕದಲ್ಲಿನ ಸ್ಮಾರ್ಟ್ ಸಿಟಿ ಕಟ್ಟಡದ ಕೊಠಡಿ ಸಂಖ್ಯೆ 5 ರಲ್ಲಿ ಮತ ಕೇಂದ್ರ ಸ್ಥಾಪಿಸಲಾಗಿದೆ. ಮೇ 1 ರಿಂದ 3 ರವರೆಗೆ 19 ಗುರುತಿನ ಚೀಟಿಗಳಲ್ಲಿ ಒಂದು ದಾಖಲೆ ಹಾಜರುಪಡಿಸಿ ಅಂಚೆ ಮತದಾನ ಮಾಡಬಹುದಾಗಿದೆ.

    ಎಲ್ಲೆಲ್ಲಿ ತರಬೇತಿ?
    ಜಗಳೂರು – ಸರ್ಕಾರಿ ಪದವಿಪೂರ್ವ ಕಾಲೇಜು
    ಹರಿಹರ – ಸೆಂಟ್ ಮೇರಿಸ್ ಕಾನ್ವೆಂಟ್ ಸ್ಕೂಲ್
    ದಾವಣಗೆರೆ ಉತ್ತರ ಮತ್ತು ದಕ್ಷಿಣ – ಸಿದ್ದಗಂಗಾ ವಿದ್ಯಾಸಂಸ್ಥೆ
    ಮಾಯಕೊಂಡ- ತರಳಬಾಳು ವಿದ್ಯಾಸಂಸ್ಥೆ, ಹದಡಿ ರಸ್ತೆ
    ಚನ್ನಗಿರಿ – ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
    ಹೊನ್ನಾಳಿ- ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ, ಹಿರೇಕಲ್ಮಠ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts