ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ : ಜಯಪ್ರಕಾಶ್ ಹೆಗ್ಡೆ

1 Min Read
jayaprakash
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬುಧವಾರ ಮತಯಾಚನೆ ವಾಡಿದರು.

ವಿಜಯವಾಣಿ ಸುದ್ದಿಜಾಲ ಉಡುಪಿ

ಜನಪ್ರತಿನಿಧಿಗಳಿಗೆ ಮತ ನೀಡುವಾಗ ಅವರು ವಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ನೀಡಬೇಕು. ಕಳೆದ ನಾಲ್ಕು ದಶಕಗಳಿಂದ ಕರಾವಳಿಯ ಅಭಿವದ್ಧಿಗಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಉತ್ತಮ ಕೆಲಸಗಳನ್ನು ವಾಡಿದ್ದೇನೆ. ಉಡುಪಿ ಪ್ರಜ್ಞಾವಂತ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆಂಬುದು ಸ್ಪಷ್ಟವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಕರ್ತವ್ಯ ನಿಭಾಯಿಸಲು ಮತ್ತೊಮ್ಮೆ ಅವಕಾಶ ಒದಗಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಉಡುಪಿ ವಿವಿಧ ಕಡೆಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಅಭಿವೃದ್ಧಿ ಕೆಲಸ ವಾಡುವುದು ಜನಪ್ರತಿನಿಧಿಯ ಕರ್ತವ್ಯ. ಕ್ಷೇತ್ರದಲ್ಲಿ ಕೆಲಸ ವಾಡದಿದ್ದಾಗ ಪ್ರಶ್ನಿಸುವ ಹಕ್ಕು ಮತದಾರರಿಗಿರುತ್ತದೆ. ಸಮರ್ಥರಾದವರನ್ನು ಆಯ್ಕೆ ವಾಡುವುದರಿಂದ ಕ್ಷೇತ್ರದ ಅಭಿವದ್ಧಿ ಸಾಧ್ಯ. ಚುನಾವಣೆಯಲ್ಲಿ ಗೆದ್ದು ಮತ್ತೆ ಆ ಕ್ಷೇತ್ರಕ್ಕೆ ಕಾಲಿಡದಿದ್ದರೆ ಜನರು ನಂಬಿಕೆ ಕಳೆದುಕೊಳ್ಳುತ್ತಾರೆ. ಹೇಳಿಕೊಳ್ಳುವ ಅಭಿವೃದ್ಧಿ ಕೆಲಸಗಳು ಇಲ್ಲದಿದ್ದಾಗ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆ ಬಗ್ಗೆ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜನಸಾವಾನ್ಯರ ಬದುಕಿಗೆ ಸ್ಪಂದಿಸಿ ಸಾವಾಜಿಕ ಮತ್ತು ಆರ್ಥಿಕ ನ್ಯಾಯ ಒದಗಿದುವುದು ಕಾಂಗ್ರೆಸ್‌ನ ಗುರಿ ಎಂದರು.

ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ವಾತನಾಡಿ, ಜಯಪ್ರಕಾಶ್ ಹೆಗ್ಡೆ ಸೋಲು-ಗೆಲುವು ಲೆಕ್ಕಿಸದೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದವರು. ಆ ಕಾರಣಕ್ಕಾಗಿ ಚಿಕ್ಕಮಗಳೂರು ಮತ್ತು ಉಡುಪಿ ಕ್ಷೇತ್ರದ ಜನ ಅವರ ಮೇಲೆ ಅಪಾರ ಭರವಸೆ ಇಟ್ಟಿದ್ದಾರೆ. ಮತದಾನ ವಾಡುವಾಗ ಹೆಗ್ಡೆ ಅವರ ಅಭಿವದ್ಧಿ ಕಾರ್ಯಗಳನ್ನು ನೆನಪಿಸಿಕೊಳ್ಳಬೇಕಾದ ಅಗತ್ಯವಿದೆ. ಕರಾವಳಿಯ ಮೀನುಗಾರರ ಬದುಕಿಗೆ ಸದಾ ಸ್ಪಂದಿಸುತ್ತಿದ್ದಾರೆ ಎಂದರು.

See also  ಪ್ರೇರಣಾ ಶಿಬಿರ

ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಇದ್ದರು.

Share This Article