ಸಿನಿಮಾ

ಪೊನ್ನಣ್ಣಗೆ ಸಚಿವ ಸ್ಥಾನ ಕೊಡಲು ಒತ್ತಾಯ

ಮಡಿಕೇರಿ:
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಗುರುವಾರ (ಮೇ ೨೫) ಬೆಳಗ್ಗೆ ೧೦.೩೦ ಗಂಟೆಗೆ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡವ ಜನಾಂಗದ ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆ ಕರೆಯಲಾಗಿದೆ. ಎಂದುಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಮತ್ತು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.

ಕೊಡವ ಜನಾಂಗ ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸುಧೀರ್ಘ ಅವಧಿಯ ಬಳಿಕ ಸಚಿವ ಸ್ಥಾನ ದೊರಕುವ ಅವಕಾಶವಿದ್ದು, ಎಲ್ಲರೂ ಪಕ್ಷಬೇಧ ಮರೆತು ಒತ್ತಾಯಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕೊಡವ ಸಮಾಜ, ಕೊಡವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಲಾ ಇಬ್ಬರಂತೆ ಸಭೆಗೆ ಆಗಮಿಸಿ ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಿದೆ. ಇದು ಯಾವುದೇ ಒಂದು ರಾಜಕೀಯ ಪಕ್ಷದ ಪರ ಅಥವಾ ವಿರೋಧದ ಸಭೆ ಆಗಿರುವುದಿಲ್ಲ. ಬದಲಾಗಿ ಕೊಡವ ಜನಾಂಗದ ಪ್ರತಿನಿಧಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಜನಾಂಗಕ್ಕೆ ಸರ್ಕಾರದಲ್ಲಿ ಪ್ರಾತಿನಿಧ್ಯ ಹಾಗೂ ಕೊಡಗಿನ ಸವಾರ್ಂಗೀಣ ಅಭಿವೃದ್ಧಿಗೆ ಒತ್ತು ನೀಡಲು ಒಕ್ಕೊರಳಿನ ನಿರ್ಣಯದ ಸಭೆಯಾಗಿದೆ ಎಂದು ತಿಳಿಸಲಾಗಿದೆ.

ಗಿರಿಜನ ಮುಖಂಡರು ಕೂಡ ಎ.ಎಸ್.ಪೊನ್ನಣ್ಣನವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಯಿರಸುಳಿ ಹಾಡಿಯ ಮರದ ನೆರಳಿನಲ್ಲಿ ತುರ್ತು ಸಭೆ ನಡೆಸಿದ ಗಿರಿಜನ ಮುಖಂಡರು ಒಂದಂಶದ ನಿರ್ಣಯ ತೆಗೆದುಕೊಂಡಿದ್ದಾರೆ.

Latest Posts

ಲೈಫ್‌ಸ್ಟೈಲ್