More

    ನಾಳೆಯಿಂದ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ

    ಮದ್ದೂರು: ಪಟ್ಟಣದ ಹಳೇ ಬಸ್ ನಿಲ್ದಾಣ ಬಳಿಯಿರುವ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ಶಂಕರ ಸಭಾ ವತಿಯಿಂದ ಮಹಾ ಶಿವರಾತ್ರಿ ಅಂಗವಾಗಿ ಮಾ.8, 9ರಂದು ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ರಾವ್ ತಿಳಿಸಿದರು.

    8ರಂದು ಬೆಳಗ್ಗೆ 9 ಗಂಟೆಗೆ ರುದ್ರ ಹೋಮ, 10 ಗಂಟೆಗೆ ಕಾಶಿ ವಿಶ್ವನಾಥನಿಗೆ ಮಹಾರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಕಾಶಿವಿಶ್ವನಾಥನಿಗೆ ವಿಶೇಷ ಅಲಂಕಾರದೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಅಂದು ಬೆಳಗ್ಗೆ 6 ಗಂಟೆಯಿಂದ 9ರ ಬೆಳಗ್ಗೆ 8 ಗಂಟೆವರೆಗೂ ದೇವಾಲಯ ತೆರೆದಿರುತ್ತದೆ. ಕಾಶಿ ವಿಶ್ವನಾಥನಿಗೆ ಮೂರು ಜಾವಾಭಿಷೇಕ ಹಾಗೂ ಮೂರು ವಿಶೇಷ ಅಲಂಕಾರ ಮಾಡಲಾಗುವುದು. ಅಲ್ಲದೆ ಶಿವರಾತ್ರಿ ಜಾಗರಣೆ ಅಂಗವಾಗಿ ರಾತ್ರಿ ಪೂರ್ಣ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

    9ರಂದು ಬೆಳಗ್ಗೆ 6 ಗಂಟೆಗೆ ಶಿವ ಪಾರ್ವತಿ ಉತ್ಸವ ಕೋಟೆ ಬೀದಿಯಲ್ಲಿ ನೆರವೇರಲಿದೆ. ತದನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

    ಶಂಕರ ಸಭಾ ಅಧ್ಯಕ್ಷ ಗುರುಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts