More

    ಪರಿವಾರ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ

    ಶನಿವಾರಸಂತೆ: ಇಲ್ಲಿನ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ ಹಾಗೂ ಪರಿವಾರ ದೇವರ ವಾರ್ಷಿಕ ಪೂಜಾ ಮಹೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.

    ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿರುವ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಮಸೀದಿಗಳಲ್ಲಿ ಕೂಡ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

    ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಶ್ರೀ ಬೀರಲಿಂಗೇಶ್ವರ ದೇವಾಲಯದಲ್ಲಿ ಬೆಳಗ್ಗೆ 6 ಗಂಟೆಗೆ ಗಂಗೆ ಪೂಜೆ, ಗೋಪೂಜೆ, ಮಂಗಳಾರತಿ ನೆರವೇರಿಸಲಾಯಿತು. ಪಟ್ಟಣದ ಸಹಕಾರ ಬ್ಯಾಂಕ್ ಸಮೀಪದಿಂದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ವರೆಗೆ ಮಹಿಳೆಯರು ಕಳಸ, ಕುಂಭ ಮೆರವಣಿಗೆಯೊಂದಿಗೆ ತೆರಳಿದರು.

    ಪಟ್ಟಣದ ಶ್ರೀ ಗಣಪತಿ ಪಾರ್ವತಿ ಚಂದ್ರಮೌಳೇಶ್ವರ ದೇವಸ್ಥಾನ, ಊರೋಡೆಯ ದೇವಸ್ಥಾನ, ಬಿದರೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ, ಹೆಮ್ಮನೆ ಗ್ರಾಮದ ಮಾರಮ್ಮಗುಡಿ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ, ತ್ಯಾಗರಾಜ ಕಾಲನಿಯ ಚೌಡೇಶ್ವರಿ ಹಾಗೂ ಶ್ರೀ ವಿಜಯ ವಿನಾಯಕ ದೇವಸ್ಥಾನ, ಕೆಆರ್‌ಸಿ ವೃತ್ತದಲ್ಲಿರುವ ಬನ್ನಿಮಂಟಪದಲ್ಲಿ, ಶ್ರೀರಾಮ ಮಂದಿರದಲ್ಲಿ ಹಾಗೂ ಮಧ್ಯಾಹ್ನ ಜಾಮೀಯಾ ಮಸೀದಿಯಲ್ಲಿ ಸರ್ವಧರ್ಮೀಯರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ನಂತರ ಶ್ರೀ ಬೀರಲಿಂಗೇಶ್ವರ ಪ್ರಬಲ ಭೈರವಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

    ವಾರ್ಷಿಕ ಪೂಜಾ ಮಹೋತ್ಸವ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ದೀಪಾರಾಧನೆ, ಗಣಪತಿ ಪೂಜೆ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ನವಗ್ರಹ ಹಾಗೂ ಮೃತ್ಯುಂಜಯ ಪೂಜೆ, ನವಗ್ರಹ, ಮೃತ್ಯಂಜಯಹೋಮ, ಗಣಪತಿ ಹೋಮ, ಧನ್ವಂತರಿ ಹೋಮ, ಮೂಲ ದೇವರಿಗೆ ಫಲ-ಪಂಚಾಮೃತ ಅಭಿಷೇಕ, ಋಕವಾರು ರುದ್ರಾಭಿಷೇಕ, ಮಹಾಬಲಿ, ಮಹಾಪೂಜೆ, ಮಹಾಮಂಗಳಾರತಿ ವಿವಿಧ ಪೂಜಾ ಕೈಕಂರ್ಯಗಳು ನೆರವೇರಿದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts