More

    ರಸ್ತೆ ಕಾಮಗಾರಿ ಕಳಪೆ ಆರೋಪ

    ಚಾಮರಾಜನಗರ: ತಾಲೂಕಿನ ಕೂಡ್ಲೂರು ಗ್ರಾಪಂ ವ್ಯಾಪ್ತಿಯ ಬೂದಿತಿಟ್ಟು ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಜಿತಾ ಅವರಿಗೆ ಗ್ರಾಪಂ ಮಾಜಿ ಅಧ್ಯಕ್ಷ ಪಿ.ಲಿಂಗರಾಜು ಮನವಿ ಸಲ್ಲಿಸಿದರು. ಬೂದಿತಿಟ್ಟು ಗ್ರಾಮದಲ್ಲಿ 2019-2020ನೇ ಸಾಲಿನಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಮಂಜೂರಾಗಿದ್ದು, ಹೊಸಹಳ್ಳಿ ನಾಲೆಯಿಂದ ದೊಡ್ಡಪಾಲದವರೆಗೆ 4.15 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿತ್ತು. ಈ ಅನುದಾನದಲ್ಲಿ ಮಾಡಿರುವ ಕಾಮಗಾರಿ ಕಳಪೆಯಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ಕ್ರಮಗೊಳ್ಳುವಂತೆ ಗ್ರಾಮಸ್ಥರು ಪಿಡಿಒ ರಂಜಿತಾ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

    ಗ್ರಾಮದ ಮುಖಂಡರಾದ ಸಿದ್ದರಾಜು, ರಾಚಶೆಟ್ಟಿ, ಬಸವರಾಜು, ನಿಂಗರಾಜು, ರಮೇಶ್, ಹರೀಶ್, ನಾಗರಾಜು ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts