ಬೆಳಗಾವಿ: ಕಳಪೆ ಸೈಕಲ್ ಪರಿಶೀಲನೆಗೆ ಸಮಿತಿ ರಚನೆ

Latest News

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಬೆಳಗಾವಿ: ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿ ಬರಲು ಸರ್ಕಾರ ಉಚಿತ ವಾಗಿ ನೀಡುತ್ತಿರುವ ಸೈಕಲ್‌ಗಳ ಗುಣಮಟ್ಟ ಪರಿಶೀಲನೆಗಾಗಿ ಜಿಪಂ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿ, ಸೈಕಲ್‌ಗಳು ತುಕ್ಕು ಹಿಡಿದಿವೆ, ಕಳಪೆ ಮಟ್ಟದಿಂದ ಕೂಡಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಸೈಕಲ್‌ಗಳ ಗುಣಮಟ್ಟ ಪರೀಕ್ಷಿಸಲು ಇಬ್ಬರು ಜಿಪಂ ಸದಸ್ಯರು, ಇಬ್ಬರು ಇಂಜಿನಿಯರ್, ಡಿಡಿಪಿಐಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ವಾರದಲ್ಲಿ ವರದಿ ಸಲ್ಲಿಸಲಿದೆ ಎಂದರು.

ತುಕ್ಕು ಹಿಡಿದಿರುವ ಮತ್ತು ಕಳಪೆ ಬಿಡಿ ಭಾಗಗಳಿಂದ ಕೂಡಿರುವ ಸೈಕಲ್‌ಗಳನ್ನು ಯಾವುದೇ ಕಾರಣಕ್ಕೂ ವಿತರಿಸಬಾರದು. ಅಂತಹ ಸೈಕಲ್‌ಗಳಿದ್ದರೆ ತಕ್ಷಣ ವಾಪಸ್ ಕಳುಹಿಸಬೇಕು. ಸಮಿತಿ ವರದಿ ಸಲ್ಲಿಸುವವರೆಗೆ ಯಾವುದೇ ಶಾಲೆಯ ಮಕ್ಕಳಿಗೆ ಸೈಕಲ್‌ಗಳನ್ನು ವಿತರಣೆ ಮಾಡಬೇಡಿ. ಈ ಕುರಿತು ಡಿಡಿಪಿಐಗಳು, ಬಿಇಒಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ವಿತರಿಸುತ್ತಿರುವ ವೇಳೆ ಜಿಪಂ ಸದಸ್ಯರನ್ನು ಆಹ್ವಾನಿಸಬೇಕು. ಜತೆಗೆ ಸೈಕಲ್‌ಗಳನ್ನು ಜಿಪಂ ಸದಸ್ಯರ ಸಮ್ಮುಖದಲ್ಲಿಯೇ ಮಕ್ಕಳಿಗೆ ವಿತರಣೆ ಮಾಡಬೇಕು. ಯಾವುದೇ ಸದಸ್ಯರನ್ನು ನಿರ್ಲಕ್ಷ ಮಾಡಬಾರದು. ಸೈಕಲ್‌ಗಳ ವಿತರಣೆಗೆ ರಾಜ್ಯ ಮಟ್ಟದಲ್ಲಿ ಗುತ್ತಿಗೆ ನೀಡಿರುವ ಹಿನ್ನೆಲೆಯಲ್ಲಿ ಯಾವ ದರದ ಆಧಾರದ ಮೇಲೆ ಸೈಕಲ್ ನೀಡುತ್ತಿದ್ದಾರೆ ಮತ್ತು ಅವುಗಳ ನಿಯಮಗಳು ಏನು ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿ: ಸರ್ಕಾರಿ ಶಾಲೆ ಕೊಠಡಿಗಳು ದುರಸ್ತಿಗಾಗಿ ಸರ್ಕಾರವು ಪ್ರತಿ ಶಾಲೆಗೆ 2 ಲಕ್ಷ ರೂ. ಅನುದಾನ ನೀಡುತ್ತಿದೆ. ಈ ಹಣದಲ್ಲಿ ಕೊಠಡಿಗಳು ದುರಸ್ತಿ ಮಾಡಲು ಸಾಧ್ಯವಿದ್ದರೆ ಮಾತ್ರ ಅಂತಹವುಗಳನ್ನು ಕಾಮಗಾರಿಗೆ ಕೈಗೆತ್ತಿ ಕೊಳ್ಳಿ. ಇಲ್ಲದಿದ್ದರೆ ಸುಮ್ಮನೆ ಅನುದಾನ ದುಂದು ವೆಚ್ಚ ಮಾಡಬೇಡಿ. ಸಂಪೂರ್ಣ ಶಿಥಿಲಾವಸ್ಥೆಯಲ್ಲಿದರೆ ಅಂತಹ ಕೊಠಡಿಗಳನ್ನು ದುರಸ್ತಿ ಮಾಡಬೇಡಿ. ಬದಲಾಗಿ ಹೊಸ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ. ತಾತ್ಕಾಲಿಕವಾಗಿ ದುರಸ್ತಿ ಮಾಡಿಕೊಂಡು ಶಾಲೆ ನಡೆಸಲು ಅವಶ್ಯಕತೆ ಇದ್ದರೆ ಅನುದಾನ ಬಳಕೆ ಮಾಡಿ ಎಂದು ಸೂಚಿಸಿದರು.

ಸಮಿತಿ ಸದಸ್ಯರು ಮಾತನಾಡಿ, ನದಿಗಳ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಎಲ್ಲ ಶಾಲೆಗಳು ಬೀಳುವ ಹಂತ ದಲ್ಲಿವೆ. ಅವುಗಳನ್ನು ದುರಸ್ತಿ ಮಾಡಿದರೂ ಪ್ರಯೋಜನ ಇಲ್ಲ. ಹಾಗಾಗಿ ಹೊಸ ಕಟ್ಟಡಗಳನ್ನು ನಿರ್ಮಿಸುವುದು ಅವಶ್ಯಕವಾಗಿದೆ. ಹೊಸ ಕಟ್ಟಡ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸುವಂತೆ ಸೂಚನೆ ನೀಡಿದರು.

ತೋಟಗಾರಿಕೆ ಇಲಾಖೆ ನಿರ್ಲಕ್ಷ: ನಗರದ ಹೊರ ಭಾಗದಲ್ಲಿ 2ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹೂ ಮಾರಾಟ ಮಳಿಗೆಗಳ ಕಟ್ಟಡ ಉದ್ಘಾಟನೆಗೊಂಡು ವರ್ಷಗಳು ಕಳೆದರೂ ಕಾರ್ಯಾರಂಭ ಮಾಡಿಲ್ಲ. ತೋಟಗಾರಿಕೆ ಇಲಾಖೆ ಅವರು ಪಾಲಿಕೆ ಅವರಿಗೆ ಹಸ್ತಾಂತರಿಸಲಾಗಿದೆ ಎನ್ನುತ್ತಿದ್ದಾರೆ. ಇದೀಗ ಮತ್ತೆ ಪಾಲಿಕೆಯಿಂದ ವಾಪಸ್ ಪಡೆಯುತ್ತಿದ್ದೇವೆ ಎಂದು ತೋಟಗಾರಿಕೆ ಅಕಾರಿಗಳು ಹೇಳುತ್ತಿರುವುದು ಸರಿಯಲ್ಲ. ತಕ್ಷಣ ಸಮಸ್ಯೆ ಪರಿಹರಿಸಬೇಕು ಎಂದು ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.

50 ಕೋಟಿ ರೂ. ಬೇಕು

ಚಿಕ್ಕೋಡಿ ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಕೊಠಡಿಗಳ ದುರಸ್ತಿಗೆ ಸಾಕಷ್ಟು ಅನುದಾನ ಬೇಕು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 974 ಶಾಲೆಗಳ ಕೊಠಡಿ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಕೊಠಡಿಗೆ ತಲಾ 2 ಲಕ್ಷ ರೂ. ರಂತೆ ಅಂದಾಜು ಪಟ್ಟಿ ತಯಾರಿಸಿದರೆ 50 ಕೋಟಿ ರೂ. ಅನುದಾನ ಬೇಕು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಜಿಪಂ ಸಿಇಒ ತಿಳಿಸಿದರು.

ಜಿಪಂ ವ್ಯಾಪ್ತಿಯಲ್ಲಿ ಕೈಗೊಂಡಿರುವ ಪ್ರತಿ ಯೊಂದು ಕಾಮಗಾರಿಗಳ ಗುಣಮಟ್ಟವನ್ನು ಥರ್ಡ್ ಪಾರ್ಟಿ ಮೂಲಕ ಪರಿಶೀಲನೆ ನಡೆಸಲಾಗುವುದು. ಇದಕ್ಕಾಗಿ ಕಾಮಗಾರಿ ಕ್ರಿಯಾ ಯೋಜನೆಯಲ್ಲಿ ಅನುದಾನ ಎತ್ತಿಹಿಡಿಯಬೇಕು.

|ಡಾ.ಕೆ.ವಿ.ರಾಜೇಂದ್ರ ಜಿಪಂ ಸಿಇಒ

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...