More

    ಬಡವರ ಆರ್ಥಿಕ ಸ್ಥಿತಿ ಸುಧಾರಿಸಿದ ನರೇಗಾ: ಕೃಷಿ ಇಲಾಖೆ ಉಪನಿರ್ದೇಶಕ ಕೆಂಗೇಗೌಡ ಹೇಳಿಕೆ

    ಸಿರಗುಪ್ಪ: ವಿಶ್ವದಲ್ಲೇ ಅತಿ ದೊಡ್ಡ ಉದ್ಯೋಗ ಯೋಜನೆಯೆಂಬ ಹೆಗ್ಗಳಿಕೆಗೆ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಪಾತ್ರವಾಗಿದೆ ಎಂದು ಕೃಷಿ ಇಲಾಖೆ ಉಪನಿರ್ದೇಶಕ ಕೆಂಗೇಗೌಡ ತಿಳಿಸಿದರು.


    ತಾಲೂಕಿನ ಬಿ.ಜೆ.ದಿನ್ನೆ ಮತ್ತು ಕೊತ್ತಲಚಿಂತೆ ಗ್ರಾಮದಲ್ಲಿ ಕೃಷಿ ಇಲಾಖೆ ಗುರುವಾರ ಕೈಗೊಂಡ ನರೇಗಾ ಯೋಜನೆಯ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

    ವರ್ಷದಲ್ಲಿ 100 ದಿನ ಕೆಲಸ ಒದಗಿಸುವ ಗುರಿ ನರೇಗಾ ಯೋಜನೆ

    ದೇಶದಲ್ಲಿ ಗ್ರಾಮೀಣ ಭಾಗದ ಜನರ ಜೀವನಕ್ಕೆ ಭದ್ರತೆ ಹೆಚ್ಚಿಸಲು ವರ್ಷದಲ್ಲಿ 100 ದಿನ ಕೆಲಸ ಒದಗಿಸುವ ಗುರಿ ನರೇಗಾ ಯೋಜನೆ ಹೊಂದಿದೆ. ಬಡಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಇದು ಬೇರೆಲ್ಲ ಯೋಜನೆಗಳಿಗಿಂತ ಭಿನ್ನವಾಗಿದ್ದು, ಉದ್ಯೋಗ ಖಾತ್ರಿ ಒದಗಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.

    ಇದನ್ನೂ ಓದಿ: ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲ ವೃದ್ಧಿ: ಕೂಲಿಕಾರರ ಕೈಗೆ ಕೆಲಸ, ಗುಳೆಗೆ ಬಿತ್ತು ಬ್ರೇಕ್

    18 ವರ್ಷಕ್ಕಿಂತ ಮೇಲ್ಪಟ್ಟವರು ಕೆಲಸ ಮಾಡಲು ಅರ್ಜಿ ಸಲ್ಲಿಸಬೇಕು.

    ಇದು ನೈಸರ್ಗಿಕ ಸಂಪನ್ಮೂಲಗಳ ಮರು ನಿರ್ಮಾಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯ ಹಾಗೂ ಆಸ್ತಿಗಳನ್ನು ಸೃಜಿಸುವ ಗುರಿ ಹೊಂದಿದೆ. 18ವರ್ಷಕ್ಕಿಂತ ಮೇಲ್ಪಟ್ಟವರು ಯೋಜನೆಯಡಿ ಕೆಲಸ ಮಾಡಲು ಅರ್ಜಿ ಸಲ್ಲಿಸಬೇಕು. ಗ್ರಾಮೀಣ ಮಟ್ಟದಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಗ್ರಾಹಕ, ಕೃಷಿ ಕಾರ್ಮಿಕರ ವೇತನ ಮುಂತಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಕೂಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಹೇಳಿದರು. ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ.ಪಾಟೀಲ್, ಕೃಷಿ ಅಧಿಕಾರಿಗಳಾದ ಗರ್ಜಪ್ಪ, ಬಾಲಾಜಿ ನಾಯ್ಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts