More

    ಕಳಪೆ ಬೀಜ ವಿತರಣೆಗೆ ವಿರೋಧ

    ಬೆಳಗಾವಿ: ಕೃಷಿ ಇಲಾಖೆಯಿಂದ ವಿತರಿಸಿರುವ ಸೋಯಾಬೀನ್ ಬೀಜಗಳು ಕಳಪೆಯಾಗಿವೆ. ಸರ್ಕಾರ ಕೂಡಲೇ ರೈತರಿಗೆ ಪರಿಹಾರ ನೀಡಬೇಕು. ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿ ಸುಳ್ಳು ದಾಖಲಾತಿ ಸೃಷ್ಟಿ ಮಾಡಿ ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರೈತರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ರೈತರಿಗೆ ಕೃಷಿ ಇಲಾಖೆ ವಿತರಿಸಿರುವ ಕಳಪೆ ಸೋಯಾಬೀನ್ ಬೀಜಗಳಿಂದ ರೈತರಿಗೆ ಹಾನಿಯಾಗಿದೆ. ಹಾನಿ ಅನುಭವಿಸಿದ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು. ಬೈಲಹೊಂಗಲ ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಕೋಟ್ಯಂತರ ರೂ. ಭ್ರಷ್ಟಾಚಾರ ನಡೆಸಿದ್ದಾರೆ.

    ಕೆರೆ ಅಭಿವೃದ್ಧಿ ಮಾಡದೇ ವಂಚಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ರಾಜು ಮರವೆ, ಹನುಮಂತ ಬಾಳೇಕುಂದ್ರಿ, ಅನಿಲ ಅನಗೋಳಕರ, ಭೂಮೇಶ ಬಿರ್ಜೆ, ರಮಾಕಾಂತ ಬಾಳೇಕುಂದ್ರಿ, ನಿತೀನ್ ಪೈಲವನಾಚೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts