More

    ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನ ಅಗತ್ಯ

    ಧಾರವಾಡ: ಜನಸಂಖ್ಯೆ ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಸಶಕ್ತ ಹಾಗೂ ಸಂಪನ್ಮೂಲಭರಿತ ರಾಷ್ಟ್ರ ನಿರ್ಮಿಸಲು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.
    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಭಾರತದ ಜನಸಂಖ್ಯೆಯು ತೀವ್ರ ಗತಿಯಲ್ಲಿ ಬೆಳೆಯುತ್ತಿದ್ದು, ಚೀನಾ ದೇಶವನ್ನು ಹಿಂದಿಕ್ಕುವ ಸಾಧ್ಯತೆ ಇದೆ. ಆದ್ದರಿಂದ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ಯುವಸಮೂಹ ಪ್ರತಿಜ್ಞೆ ಮಾಡಬೇಕು ಎಂದರು.
    ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ. ನಿಂಬಣ್ಣವರ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಅಯ್ಯನಗೌಡರ, ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ಪರಶುರಾಮ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಎಸ್.ಎಸ್ ಕಳಸೂರಮಠ, ಮಂಜುನಾಥ ಸೊಪ್ಪಿನಮಠ, ಬಿ.ಆರ್. ಪಾತ್ರೋಟ, ಕೆ.ಕೆ. ಚವ್ಹಾಣ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts