More

    ಜನಸಂಖ್ಯೆಯ ಏರಿಕೆ ಆರ್ಥಿಕ ಪ್ರಗತಿಗೆ ತೊಡಕು

    ರಟ್ಟಿಹಳ್ಳಿ: ದೇಶದ ಅರ್ಥಿಕ ಅಭಿವೃದ್ಧಿಯಲ್ಲಿ ಜನಸಂಖ್ಯೆಯ ಏರಿಕೆ ಮತ್ತು ಇಳಿಕೆ ಅತ್ಯಂತ ಮುಖ್ಯ ಪಾತ್ರ ವಹಿಸುತ್ತವೆ. ವಿಪರೀತ ಜನಸಂಖ್ಯೆ ಏರಿಕೆಯೂ ದೇಶದ ಆರ್ಥಿಕ ಅಭಿವೃದ್ಧಿಯ ಹಿನ್ನಡೆಗೆ ಕಾರಣವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಲೋಕೇಶ ಕುಮಾರ ಹೇಳಿದರು.

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

    ಭಾರತ ದೇಶ 142 ಕೋಟಿ ಜನಸಂಖ್ಯೆ ಹೊಂದಿ ವಿಶ್ವದಲ್ಲಿ ಮೊದಲ ಸ್ಥಾನದಲ್ಲಿದೆ. ಅನೇಕ ವೈದ್ಯಕೀಯ ಆವಿಷ್ಕಾರಗಳು ಮತ್ತು ಸೂಕ್ತ ಚಿಕಿತ್ಸೆಗಳಿಂದ ಜನನ ಪ್ರಮಾಣ ಅಧಿಕ ಹಾಗೂ ಮರಣ ಪ್ರಮಾಣ ಕಡಿಮೆಯಾಗಿದೆ. ಪ್ರತಿಯೊಬ್ಬರೂ ಜನಸಂಖ್ಯೆ ಏರಿಕೆ ನಿಯಂತ್ರಣಕ್ಕೆ ಕುಟುಂಬ ಯೋಜನೆಗಳ ಬಗ್ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದರು.

    ಪ್ರಾಚಾರ್ಯ ಡಿ.ರಮೇಶ ಅಧ್ಯಕ್ಷತೆ ವಹಿಸಿದ್ದರು. ಡಾ. ನೀತು, ನಾಗನಗೌಡ ಕೋಣ್ತಿ, ಬಿ.ಎಚ್. ದುಗ್ಗತ್ತಿ, ನಾಗರಾಜ ಪ್ಯಾಟಿ, ರಾಮಪ್ಪ ಸದರಪ್ಪನವರ, ಚಿದಾನಂದ ಮಾಣೆ, ಆಸ್ಪತ್ರೆ ಸಿಬ್ಬಂದಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿ.ಎಸ್. ಕಮ್ಮಾರ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts