More

    ಅಶ್ಲೀಲ ವಿಡಿಯೋ ಪ್ರಕರಣ ಸಿಬಿಐಗೆ ವಹಿಸಲಿ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುರಿತಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಶಾಸಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಭೈರತಿ ಬಸವರಾಜ ಆಗ್ರಹಿಸಿದರು.

    ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗಾಗಿ ಎಸ್​ಐಟಿ ರಚಿಸಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸತ್ಯಾಸತ್ಯತೆ ಹೊರಗೆ ಬರಬೇಕಾದರೆ ಸಿಬಿಐಗೆ ವಹಿಸುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯವಾಗಿದೆ ಎಂದರು.

    ಹರಕೆಯ ಕುರಿ

    ಧಾರವಾಡ ಲೋಕಸಭೆ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ಬಿಜೆಪಿ ಪ್ರಲ್ಹಾದ ಜೋಶಿ ಪ್ರಬಲ ಅಭ್ಯರ್ಥಿ. ಇವರ ವಿರುದ್ಧ ಕಾಂಗ್ರೆಸ್​ನವರು ಕುರುಬ ಸಮಾಜದ ವಿನೋದ ಅಸೂಟಿ ಅವರನ್ನು ಕಣಕ್ಕಿಳಿಸಿ ಹರಕೆಯ ಕುರಿಯನ್ನಾಗಿ ಮಾಡಿರುವುದು ನೋವಿನ ಸಂಗತಿ. ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಮಾತ್ರ ಅಸೂಟಿ ಪರಿಚಿತರು. ಉಳಿದ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಅಸೂಟಿ ಯಾರೆಂದು ಜನರಿಗೆ ಗೊತ್ತಿಲ್ಲ ಎಂದು ಟೀಕಿಸಿದರು.

    ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ದೇಶದ ಸುರಕ್ಷತೆ, ಅಭಿವೃದ್ಧಿ ಮುಖ್ಯ ಎಂದು ಮಹಿಳೆಯರು ಬಿಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ನನಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಗೆಲ್ಲುವ ಸಾಮರ್ಥ್ಯವಿರುವ, ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ, ಇತ್ಯಾದಿ ಅಂಶಗಳನ್ನು ಗಮನಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ರಾಣೆಬೆನ್ನೂರಿನಲ್ಲಿ ಕಾಂತೇಶ್ ಅವರಿಗೆ ಕುರುಬ ಸಮಾಜದಿಂದ ಉತ್ತಮ ಬೆಂಬಲವಿತ್ತು. ಆದರೆ, ಬೇರೆ ಸಮಾಜದ ಪ್ರಭಾವ ಹೆಚ್ಚಿದ್ದರಿಂದ ಕಾಂತೇಶ ಅವರಿಗೆ ಟಿಕೆಟ್ ಕೈ ತಪ್ಪಿದೆ ಎಂದು ಹೇಳಿದರು.

    ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐಐಟಿ, ಐಐಐಟಿ ಸ್ಥಾಪನೆ, ರೈಲ್ವೆ ನಿಲ್ದಾಣ-ವಿಮಾನ ನಿಲ್ದಾಣ ಸುಧಾರಣೆ, ಇನ್ನು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಪ್ರಲ್ಹಾದ ಜೋಶಿ ಅವರಿಗೆ ಕುರುಬ ಸಮಾಜ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಹಾವೇರಿ ಸೇರಿ ಉತ್ತರ ಕರ್ನಾಟಕ ಭಾಗದ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಹಾಲುಮತ ಸಮಾಜದವರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾ. ನಾಗರಾಜ, ರವಿ ದಂಡಿನ, ಪರಶುರಾಮ ದಿವಾನ, ದತ್ತಮೂರ್ತಿ ಕುಲಕರ್ಣಿ, ಬೀರಪ್ಪ ಖಂಡೇಕರ, ಗುರು ಪಾಟೀಲ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts