ಕಳಿಹಿತ್ಲು ಬಂದರು ಅವ್ಯವಸ್ಥೆಯ ಆಗರ

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

ಶಿರೂರು: ಬೈಂದೂರು ತಾಲೂಕಿನ ಶಿರೂರಿನ ಕಳಿಹಿತ್ಲು ಬಂದರು ಇಲಾಖೆಯ ನಿರ್ಲಕ್ಷೃ ಹಾಗೂ ಜನಪ್ರತಿನಿಧಿಗಳ ನಿರಾಸಕ್ತಿ ಪರಿಣಾಮ ಅವ್ಯವಸ್ಥೆಯ ಆಗರವಾಗಿದೆ. ನಿತ್ಯ ಲಕ್ಷಾಂತರ ರೂ. ವ್ಯಾಪಾರ ವಹಿವಾಟು ನಡೆಸುವ ಮೀನುಗಾರಿಕಾ ಪ್ರದೇಶ ಮೂಲಸೌಕರ್ಯ ಕೊರತೆಯಿಂದ ನಲುಗಿದೆ.

ಶಿರೂರು ಗ್ರಾಪಂ ವ್ಯಾಪ್ತಿಯ ಸಮುದ್ರ ಕಿನಾರೆಯಲ್ಲಿರುವ ಕಳಿಹಿತ್ಲು ನೈಸರ್ಗಿಕ ಸೌಂದರ‌್ಯದಿಂದ ಕಂಗೊಳಿಸುವ ಪ್ರದೇಶ. ಹಲವು ವರ್ಷಗಳ ಹಿಂದೆ ಈ ಭಾಗ ತಾಲೂಕಿನ ದೊಡ್ಡ ಮೀನು ಸಂಗ್ರಹಣೆ ಮತ್ತು ಸಂಸ್ಕರಣೆ ಕೇಂದ್ರವಾಗಿತ್ತು. ಪ್ರತಿವರ್ಷ ಸಾಂಪ್ರದಾಯಿಕ ದೋಣಿ ಸ್ಪರ್ಧೆ ನಡೆಯುತ್ತಿತ್ತು. ನದಿ ಮತ್ತು ಸಾಗರ ಸಂಗಮ ಪ್ರದೇಶವಾದ ಇಲ್ಲಿ ಮಳೆಗಾಲ ಹೊರತುಪಡಿಸಿ ಉಳಿದೆಲ್ಲ ತಿಂಗಳುಗಳಲ್ಲೂ ಮೀನುಗಾರಿಕೆ ನಡೆಯುತ್ತದೆ. ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಉಪ್ಪುಂದ, ತಾರಾಪತಿ, ನಾಗೂರು ಮುಂತಾದ ಕಡೆಗಳಿಂದ 200ಕ್ಕೂ ಅಧಿಕ ದೋಣಿಗಳು ಈ ಬಂದರು ಮೂಲಕವೇ ಮೀನು ವ್ಯವಹಾರ ನಡೆಸುತ್ತದೆ.

30 ವರ್ಷಗಳ ಹಿಂದೆ ತಡೆಗೋಡೆ ನಿರ್ಮಾಣವಾಗಿದೆ. ಕರಾವಳಿ ಮಾರ್ಗ ಹಾಗೂ ಶಿರೂರು ಕೆಳಪೇಟೆಯಿಂದ ಬರುವ ವಾಹನಗಳು ರುದ್ರಭೂಮಿ ಕ್ರಾಸ್‌ನಿಂದ ಕಳಿಹಿತ್ಲುವರೆಗೆ ಮಣ್ಣಿನ ರಸ್ತೆಯಲ್ಲಿಯೆ ಸಂಪರ್ಕಿಸಬೇಕು. ಕಳೆದ ಹಲವು ವರ್ಷಗಳಿಂದ ಸಂಬಂಧಿಸಿದವರಿಗೆ ಮನವಿ ನೀಡಿದರೂ ಸಹ ರಸ್ತೆ ನಿರ್ಮಾಣವಾಗಿಲ್ಲ. ಮಳೆಗಾಲದ ಅಬ್ಬರ ಮತ್ತು ನಿರಂತರ ವಾಹನ ಸಂಚಾರದಿಂದ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ. ದ್ವಿಚಕ್ರ ವಾಹನ ಕೂಡ ಸಂಚರಿಸಲಾಗದ ಪರಿಸ್ಥಿತಿ ಇದೆ. ಮಾತ್ರವಲ್ಲದೆ ಇಲ್ಲಿನ ಶಾಲೆ ಹಾಗೂ ಅಂಗನವಾಡಿಗೆ ಕೆಸರುಮಯ ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ.

ಅಭಿವೃದ್ಧಿ ಬಗ್ಗೆ ಆಸಕ್ತಿ ಇರಲಿ: ಕಳಿಹಿತ್ಲು ಬಂದರು ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿರುವ ಪ್ರದೇಶ. ನೂರಾರು ದೋಣಿಗಳು ಈ ಪ್ರದೇಶವನ್ನು ಅವಲಂಬಿಸಿದ್ದರೂ ಸಹ ಅಭಿವೃದ್ಧಿ ಶೂನ್ಯವಾಗಿದೆ. ದೋಣಿಗಳಿಗೆ ಮೀನು ಖಾಲಿ ಮಾಡಲು ಸೂಕ್ತ ವ್ಯವಸ್ಥೆ, ಮತ್ಸ್ಯ ವ್ಯಾಪಾರಕ್ಕೆ ಅವಶ್ಯವಿರುವ ಸೌಲಭ್ಯ, ಬೀದಿದೀಪ, ಕುಡಿಯುವ ನೀರು, ಯಾವುದರ ಬಗ್ಗೆಯೂ ಇಲಾಖೆ ಗಮನ ಹರಿಸಿಲ್ಲ. ಶೌಚಗೃಹ ಇಲ್ಲದೆ ಜನರು ಪರದಾಡಬೇಕಾದ ಪರಿಸ್ಥಿತಿ ಇದೆ. ಈ ಪ್ರದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರತಿವರ್ಷ ಬೀಚ್ ಉತ್ಸವ ನಡೆಸುವ ಮೂಲಕ ಕಳಿಹಿತ್ಲು ಪ್ರವಾಸೋದ್ಯಮ ಪ್ರದೇಶವಾಗಿ ಮಾರ್ಪಾಡಾಗಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೀನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿರುವ ಇಲ್ಲಿನ ಸ್ಥಳೀಯರಿಗೆ ಕಳಿಹಿತ್ಲು ಅಭಿವೃದ್ಧಿಯಾದರೆ ಮೀನುಗಾರಿಕೆ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಪ್ರವಾಸೋದ್ಯಮ ಅನುಕೂಲತೆ ಪಡೆದುಕೊಳ್ಳಲು ಬಂದರು ಅಭಿವೃದ್ಧಿ ಮತ್ತು ರಸ್ತೆ ನಿರ್ಮಾಣದ ಬಗ್ಗೆ ಶೀಘ್ರ ಆಸಕ್ತಿ ವಹಿಸಬೇಕಾಗಿದೆ.

ಹಲವಾರು ವರ್ಷಗಳಿಂದ ಕಳಿಹಿತ್ಲು ಬಂದರು ಸಮಸ್ಯೆ ಕುರಿತು ಜನಪ್ರತಿನಿಧಿಗಳ ಗಮನ ಸೆಳೆಯಲಾಗುತ್ತಿದೆ. ಇದುವರೆಗೆ ಯಾವುದೇ ಅನುದಾನ ಬಂದಿಲ್ಲ. ಸೆಪ್ಟೆಂಬರ್‌ನಲ್ಲಿ ನೂರಾರು ದೋಣಿಗಳು ಮೀನುಗಾರಿಕೆಗಾಗಿ ಕಳಿಹಿತ್ಲು ಬಂದರನ್ನು ಅವಲಂಬಿಸಿವೆ. ಇಲ್ಲಿನ ರಸ್ತೆ ಸಂಪೂರ್ಣ ಕೆಸರುಮಯವಾಗಿ ನಡೆದಾಡಲು ಕಷ್ಟವಾಗುತ್ತಿದೆ. ಶೀಘ್ರ ರಸ್ತೆ ನಿರ್ಮಾಣಕ್ಕೆ ಇಲಾಖೆ ಪ್ರಯತ್ನಿಸಬೇಕು.
| ಜಿ. ಅಜೀಜ್, ಅಧ್ಯಕ್ಷರು, ಅಲ್ಪಸಂಖ್ಯಾತರ ನಾಡದೋಣಿ ಮೀನುಗಾರರ ಸಂಘ ಕಳಿಹಿತ್ಲು-ಶಿರೂರು

ಕಳಿಹಿತ್ಲು ರಸ್ತೆ ಅಭಿವೃದ್ಧಿ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಶಾಸಕರು ಕೂಡ ಕಳಿಹಿತ್ಲು ರಸ್ತೆ ಅಭಿವೃದ್ಧಿ ಮತ್ತು ಬಂದರು ಪ್ರಗತಿ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಅತಿ ಶೀಘ್ರದಲ್ಲಿ ಕಳಿಹಿತ್ಲು ರಸ್ತೆ ನಿರ್ಮಾಣದ ಪ್ರಯತ್ನ ಮಾಡಲಾಗುವುದು.
|ಸುರೇಶ್ ಬಟ್ವಾಡಿ, ಜಿಲ್ಲಾ ಪಂಚಾಯಿತಿ ಸದಸ್ಯರು ಶಿರೂರು

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...