

ಕೋಟ: ಗರ್ಭಿಣಿಯರು ಸೇರಿದಂತೆ ಮಕ್ಕಳಲ್ಲಿ ಪೌಷ್ಟಿಕಾಹಾರ ಸಮತೋಲನಕ್ಕಾಗಿ ಪ್ರಧಾನಮಂತ್ರಿಗಳು ಪೋಷಣ್ ಅಭಿಯಾನ ಅನುಷ್ಠಾನಗೊಳಿಸಿದ್ದಾರೆ. ಯೋಜನೆ ಜನರಿಗೆ ತಲುಪಿದಾಗ ಯಶಸ್ಸು ಕಾಣಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಹಾದಿಮನಿ ಹೇಳಿದರು.
ಗುರುವಾರ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ವಾಸಾಚರಣೆ ಉದ್ಘಾಟಿಸಿ ವಾತನಾಡಿದರು.
ಸಾಲಿಗ್ರಾಮ ಪಪಂ ಅಧ್ಯಕ್ಷೆ ಸುಕನ್ಯಾ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸದಸ್ಯರಾದ ಶ್ರೀನಿವಾಸ ಅಮೀನ್, ಸಂಜೀವ ದೇವಾಡಿಗ, ಸುಲತಾ ಹೆಗ್ಡೆ, ರಾಜು ಪೂಜಾರಿ, ಅನಸೂಯ ಹೇರ್ಳೆ, ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜಯಶೀಲ ಆಚಾರ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಭಾಗೀರಥಿ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಶಾಲಿನಿ ವಂದಿಸಿದರು.