More

    ಒಂದೇ ದಿನ 12 ಜನರಿಗೆ ಪಾಸಿಟಿವ್

    ಹಾವೇರಿ: ಜಿಲ್ಲೆಯಲ್ಲಿ ಶನಿವಾರ 12 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 38 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ 21 ಜನರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 17 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ತಿಳಿಸಿದ್ದಾರೆ.

    12 ಸೋಂಕಿತರಲ್ಲಿ 4 ವರ್ಷದ ಬಾಲಕ ಹಾಗೂ 16 ಮತ್ತು 15 ವರ್ಷದ ಇಬ್ಬರು ಬಾಲಕಿಯರು, ಇಬ್ಬರು ವೃದ್ಧೆಯರು ಸೇರಿದ್ದಾರೆ.

    ಶಿಗ್ಗಾಂವಿ ಪಟ್ಟಣದ ದೇಸಾಯಿಗಲ್ಲಿ ಹಾಗೂ ಗೌಡ್ರ ಓಣಿಯ ನಿವಾಸಿಗಳಾದ 44 ವರ್ಷದ ಮಹಿಳೆ, 48 ವರ್ಷದ ಪುರುಷ, 23 ವರ್ಷದ ಪುರುಷ, 16 ವರ್ಷದ ಬಾಲಕಿ, 75 ವರ್ಷದ ವೃದ್ಧೆ, 85 ವರ್ಷದ ವೃದ್ಧೆ, 45 ವರ್ಷದ ಮಹಿಳೆ, 20 ವರ್ಷದ ಮಹಿಳೆ, 15 ವರ್ಷದ ಬಾಲಕಿ, 4 ವರ್ಷದ ಬಾಲಕ, 60 ವರ್ಷದ ಪುರುಷ, 40 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

    ಹುಬ್ಬಳ್ಳಿ ಕಿಮ್ಸ್​ನಲ್ಲಿ ಕರೊನಾ ಪಾಸಿಟಿವ್ ದೃಢಪಟ್ಟ ವೃದ್ಧೆಯ ಮಗನಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಈತನ ಪ್ರಾಥಮಿಕ ಸಂಪರ್ಕದಿಂದ 11 ಜನರಿಗೆ ಸೋಂಕು ದೃಢಪಟ್ಟಿದೆ. ಎಲ್ಲ ಸೋಂಕಿತರ ಗಂಟಲ ದ್ರವವನ್ನು ಜೂ. 17ರಂದು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂ. 19ರ ರಾತ್ರಿ ಕರೊನಾ ಸೋಂಕು ದೃಢಪಟ್ಟಿರುವ ಲ್ಯಾಬ್ ವರದಿ ಬಂದ ಕೂಡಲೆ ಎಲ್ಲ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

    ಶಿಗ್ಗಾಂವಿ ನಗರದ ಗೌಡರ ಓಣಿಯ ಹಾಗೂ ದೇಸಾಯಿಗಲ್ಲಿ ರಸ್ತೆಯೊಳಗೊಂಡಿರುವ 100 ಮೀಟರ್ ಪ್ರದೇಶವನ್ನು ಕಂಟೇನ್ಮೆಂಟ್ ವಲಯವಾಗಿ ಈಗಾಗಲೇ ಪರಿವರ್ತಿಸಲಾಗಿದೆ. ಸುತ್ತಲಿನ 200 ಮೀಟರ್ ಪ್ರದೇಶವನ್ನು ಬಫರ್ ಜೋನ್ ಎಂದು ಘೊಷಿಸಲಾಗಿದೆ. ಇನ್ಸಿಡೆಂಟ್ ಕಮಾಂಡರ್ ಆಗಿ ಶಿಗ್ಗಾಂವಿ ತಹಸೀಲ್ದಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts