More

    ಶಾಸಕ ಜಮೀರ್ ಹೆಸರಲ್ಲಿ ಅವಹೇಳನಕಾರಿ ಪೋಸ್ಟ್

    ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಫೋಟೋವನ್ನು ಅವಹೇಳನಕಾರಿಯಾಗಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಜಮೀರ್ ಅವರ ಆಪ್ತ ಕೊಟ್ಟ ದೂರಿನ ಅನ್ವಯ ಶರತ್ ಮತ್ತು ಋಷಿಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಎನ್​ಆರ್​ಸಿ ಮತ್ತು ಸಿಎಎ ಜಾರಿ ಖಂಡಿಸಿ ನಡೆದ ಪ್ರತಿಭಟನೆಗೆ ಜಮೀರ್ ಅಹಮದ್ ಬೆಂಬಲ ನೀಡಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹಗಳನ್ನು ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts