21.7 C
Bengaluru
Tuesday, January 21, 2020

ಪೋಸ್ಟಾಫೀಸಲ್ಲೇ ಫಸಲ್ ಬಿಮಾ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಬೆಂಗಳೂರು: ದೇಶದ ಪ್ರತಿ ಅಂಚೆ ಕಚೇರಿ ಮೂಲಕ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿ ಆಗುವ ಅವಕಾಶ ಕಲ್ಪಿಸಲಾಗುವುದು ಎಂದು ಯೋಜನೆಯ ಸಿಇಒ ಡಾ.ಆಶಿಶ್ ಕುಮಾರ್ ಭುಂಟಿಯಾ ತಿಳಿಸಿದರು.

ಶುಕ್ರವಾರ ನಗರದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಆಯೋಜಿಸಿದ್ದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮೊದಲ ರಾಷ್ಟ್ರೀಯ ಪ್ರಗತಿ ಪರಿಶೀಲನಾ ಸಮ್ಮೇಳನದಲ್ಲಿ ಹೇಳಿದರು.

ಯೋಜನೆ ಆರಂಭವಾದಾಗಿನಿಂದ 10.62 ಕೋಟಿ ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ. 2016-17ರಲ್ಲಿ 5.7 ಕೋಟಿ ಹಾಗೂ 2017-18ರಲ್ಲಿ 4.9 ಕೋಟಿ ರೈತರು ವಿಮೆ ಮಾಡಿಸಿದ್ದರು. ದೇಶದ 4 ರಾಜ್ಯಗಳಲ್ಲಿ ಬೆಳೆ ಸಾಲ ಮನ್ನಾ ಹಾಗೂ ಬೆಳೆ ವಿಮೆಗೆ ಆಧಾರ್ ಕಡ್ಡಾಯಗೊಳಿಸಿದ್ದರಿಂದ 2017-18ರಲ್ಲಿ ರೈತರ ಸಂಖ್ಯೆ 80 ಲಕ್ಷಕ್ಕೆ ಇಳಿದಿತ್ತು. ಸಾಲರಹಿತ ರೈತರನ್ನು ಪ್ರಧಾನಮಂತ್ರಿ ಫಸಲ್ ಬಿಮಾದತ್ತ ಆಕರ್ಷಿಸಲು ಅಂಚೆ ಕಚೇರಿಗಳಲ್ಲೇ ದಾಖಲೆ ಸಲ್ಲಿಕೆ ಹಾಗೂ ವಿಮೆ ಪ್ರೀಮಿಯಂ ಕಟ್ಟಲು ಸೌಲಭ್ಯ ಕಲ್ಪಿಸಲಾಗುವುದು. ಈ ಕುರಿತು ಅಂಚೆ ಇಲಾಖೆ ಜತೆ ಚರ್ಚೆ ನಡೆಸಲಾಗುತ್ತಿದೆ ಎಂದರು.

ಸೂಕ್ತ ದಾಖಲೆ ಇಲ್ಲದೆ ಎರಡೆರಡು ಕಡೆ ಸಾಲ ಪಡೆದುಕೊಂಡ ರೈತರು ಆಧಾರ್ ಸಂಖ್ಯೆ ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವಿಮೆ ಪಡೆದುಕೊಳ್ಳುವ ರೈತರ ಸಂಖ್ಯೆ ತಗ್ಗಿದೆ. ಫಸಲ್ ಬಿಮಾ ಯೋಜನೆ ಬಗ್ಗೆ ಇನ್ನೂ ಹಲವರಿಗೆ ಮಾಹಿತಿ ಇಲ್ಲ. ವಿಮಾ ಕಂಪನಿಗಳು 2018ರ ಮುಂಗಾರು ಅವಧಿಯಲ್ಲಿ ಕೇವಲ 6 ಲಕ್ಷ ರೈತರನ್ನು ಸಂರ್ಪಸಿ ವಿಮೆ ಮಾಡಿಸಿವೆ. ಕೇವಲ 9 ಲಕ್ಷ ರೈತರು ಆನ್​ಲೈನ್ ಮೂಲಕ ಫಸಲ್ ಬಿಮಾ ಯೋಜನೆ ಪಡೆದಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನ, ಹರಿಯಾಣ, ಬಿಹಾರಗಳಲ್ಲಿ ಸಾಲ ರಹಿತ ರೈತರು ಫಸಲ್ ಬಿಮಾ ಯೋಜನೆ ಫಲಾನುಭವಿಗಳಾಗುವ ಸಂಖ್ಯೆ ಕೇವಲ ಶೇ.1-3 ರಷ್ಟಿದೆ ಎಂದರು.

ರಾಜ್ಯ ಸರ್ಕಾರಗಳಿಗೆ ಸೂಚನೆ: ಆರೋಗ್ಯ, ಮೋಟಾರು ವಾಹನ ವಿಮೆಯಲ್ಲಿ ವ್ಯಕ್ತಿ ವಿಮೆಗೆ ಅರ್ಜಿ ಸಲ್ಲಿಸಿದ 30 ದಿನದೊಳಗಾಗಿ ವಿಮಾ ಕಂಪನಿ ಕಡ್ಡಾಯವಾಗಿ ಪರಿಹಾರ ನೀಡಬೇಕು. ಆದರೆ ಬೆಳೆ ವಿಮೆಯ ಕೆಲ ಪ್ರಕರಣಗಳಲ್ಲಿ ವರ್ಷ ಕಳೆದರೂ ಪ್ರೀಮಿಯಂ ಕಟ್ಟಿದ ರೈತರಿಗೆ ಪರಿಹಾರ ಸಿಗುತ್ತಿಲ್ಲ. ರಾಜ್ಯ ಸರ್ಕಾರಗಳು ಪ್ರೀಮಿಯಂ ಮೊತ್ತವನ್ನು ಆಯಾ ವಿಮಾ ಕಂಪನಿಗಳಿಗೆ ಠೇವಣಿ ಮಾಡದಿರುವುದು ಇದಕ್ಕೆ ಕಾರಣ. ಹೀಗಾಗದಂತೆ ರಾಜ್ಯ ಸರ್ಕಾರಗಳು ಗಮನಹರಿಸಬೇಕು ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್​ಡಿಎ) ಚೇರ್ಮನ್ ಸುಭಾಷ್ ಚಂದ್ರ ಖುಂಟಿಸ ಹೇಳಿದರು.

12ನೇ ಸ್ಥಾನದಲ್ಲಿ ಕರ್ನಾಟಕ

2017ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ. ರಾಜ್ಯದ ಶೇ.51 ಸಾಲ ರಹಿತ ರೈತರು ವಿಮೆ ಮಾಡಿಸಿಕೊಂಡಿದ್ದು, ಶೇ.16 ಬಿತ್ತನೆ ಪ್ರದೇಶ ವಿಮೆಗೆ ಒಳಪಟ್ಟಿದೆ. 2017 ಮುಂಗಾರಿನಲ್ಲಿ ಶೇ.64 ಪರಿಹಾರ ವಿತರಿಸಲಾಗಿದೆ. ಮೊದಲನೇ ಸ್ಥಾನದಲ್ಲಿ ಛತ್ತೀಸ್​ಗಡ್, 2ನೇ ಸ್ಥಾನದಲ್ಲಿ ಮಹಾರಾಷ್ಟ್ರ ಹಾಗೂ 3ನೇ ಸ್ಥಾನದಲ್ಲಿ ಒಡಿಶಾ ರಾಜ್ಯಗಳಿವೆ.

ಪ್ರಾಣಿಗಳಿಂದ ಬೆಳೆ ಹಾನಿಗೂ ಪರಿಹಾರ

ಪ್ರಸ್ತುತ ಬರಗಾಲ, ಭಾರಿ ಮಳೆ ಮುಂತಾದ ನೈಸರ್ಗಿಕ ವಿಕೋಪಗಳಿಗಷ್ಟೇ ವಿಮೆ ಪರಿಹಾರ ಸಿಗುತ್ತಿದೆ. ಮುಂದಿನ ಮುಂಗಾರಿನಿಂದ ಕಾಡುಪ್ರಾಣಿಗಳ ಹಾವಳಿ, ಮೇಘಸ್ಪೋಟ, ಕಾಡ್ಗಿಚ್ಚಿನಿಂದಾದ ಬೆಳೆ ಹಾನಿಗೂ ವಿಮೆ ಸಿಗಲಿದೆ ಎಂದು ಆಶಿಶ್ ಕುಮಾರ್ ತಿಳಿಸಿದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...