25.5 C
Bangalore
Monday, December 16, 2019

ಮೈಲಾರ ಮಹದೇವಪ್ಪ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ನಾಳೆ 

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಾವೇರಿ: ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಜಿಲ್ಲೆಯ ವೀರಯೋಧ ಮೈಲಾರ ಮಹದೇವಪ್ಪ ಅವರ ಸ್ಮರಣೆಗಾಗಿ ಭಾರತೀಯ ಅಂಚೆ ಇಲಾಖೆಯು ಅಂಚೆಚೀಟಿ ಬಿಡುಗಡೆಗೊಳಿಸುತ್ತಿದೆ.

- Advertisement -

ಮಹಾತ್ಮ ಗಾಂಧೀಜಿಯವರ ಶಿಷ್ಯರಾಗಿ, ಕೇವಲ 32 ವರ್ಷ ಬದುಕಿದ್ದರೂ ಸಾರ್ಥಕ ಜೀವನ ಸಾಗಿಸಿ ಹುತಾತ್ಮರಾದ ಮೈಲಾರ ಮಹದೇವಪ್ಪ ಅವರ ತ್ಯಾಗ, ಬಲಿದಾನದ ಗೌರವಾರ್ಥವಾಗಿ ಭಾರತ ಸರ್ಕಾರ ಅಂಚೆಚೀಟಿ ಬಿಡುಗಡೆ ಮಾಡುತ್ತಿದೆ. ಅಂಚೆ ಇಲಾಖೆಯು ಸೆ. 3ರಂದು ಬೆಂಗಳೂರಿನ ಗಾಂಧಿಭವನದಲ್ಲಿ ಬೆಳಗ್ಗೆ 10 ಗಂಟೆಗೆ ಅಂಚೆಚೀಟಿ ಬಿಡುಗಡೆ ಸಮಾರಂಭ ಹಮ್ಮಿಕೊಂಡಿದೆ. ಹುತಾತ್ಮ ಮೈಲಾರ ಮಹದೇವಪ್ಪ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಅಂಚೆ ಇಲಾಖೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸ್ವಾತಂತ್ರ್ಯ ಹೋರಾಟದ ಕಿಚ್ಚೆಬ್ಬಿಸಿದ್ದ ಮೈಲಾರ ಮಹದೇವಪ್ಪ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ 8-6-1911ರಲ್ಲಿ ಜನಿಸಿದ ಮೈಲಾರ ಮಹದೇವಪ್ಪ ಅವರ ತಂದೆ ಮಾರ್ತಂಡಪ್ಪ, ತಾಯಿ ಬಸಮ್ಮ. ಇಬ್ಬರೀ ಸ್ವಾತಂತ್ರ್ಯ ಹೋರಾಟಗಾರರಾದ್ದರಿಂದ ಬಾಲ್ಯದಲ್ಲಿಯೇ ಮಹದೇವಪ್ಪನವರಿಗೆ ಹೋರಾಟದ ಕಿಚ್ಚು ಹತ್ತಿಕೊಂಡಿತ್ತು. ಮೊಟೆಬೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ಧಾರವಾಡದ ಮೃತ್ಯುಂಜಯ ಸ್ವಾಮಿಗಳ ಶಿಕ್ಷಣ ಸಂಸ್ಥೆ ಹಾಗೂ ಕಾಕೋಳ ಗ್ರಾಮದ ಆಂಗ್ಲೋ ವ್ಹೆರ್ನಾಕ್ಯೂಲರ್ ಸ್ಕೂಲಿನಲ್ಲಿ ವಿದ್ಯಾಭ್ಯಾಸ ನಡೆಸಿದರು.

1930ರಲ್ಲಿ ನಡೆದ ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ನೂರಾರು ಜನ ಹೋರಾಟಗಾರರಲ್ಲಿ ಮಹಾದೇವ ಅವರು ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದರು. ಅಂಕೋಲಾದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಇಲ್ಲಿಯ ಜನರನ್ನು ಆವರಿಸಿಬಿಟ್ಟಿತ್ತು. ಆಗ ಬಂಧನಕ್ಕೊಳಗಾದ ಗಾಂಧೀಜಿಯರೊಡನೆ ಮೈಲಾರ ಮಹಾದೇವರೂ ಜೈಲು ಸೇರಿದ್ದರು.

1932ರ ನವೆಂಬರದಲ್ಲಿ ನಡೆದ 2ನೇ ದುಂಡುಮೇಜಿನ ಪರಿಷತ್​ದಲ್ಲಿ ಹೋರಾಟಗಾರರ ಸ್ವಾತಂತ್ರ್ಯ ಕನಸನ್ನು ಮನ್ನಿಸಲಾಗಲಿಲ್ಲ. ಆಗ ಕಾನೂನು ಭಂಗ ಚಳುವಳಿಯು ಎಲ್ಲೆಡೆ ತಾರಕಕ್ಕೇರಿತು. ಗಾಂಧೀಜಿ ಹಾಗೂ ಸಂಗಡಿಗರನ್ನು ಮತ್ತೆ ಸೆರೆ ಹಿಡಿಯಲಾಯಿತು. ಇತ್ತ ಮೈಲಾರ ಮಹಾದೇವರು ತಮ್ಮ ಶಾಲಾ ಸಂಗಡಿಗರೊಂದಿಗೆ ಶಾಲೆಗೆ ಕೈಕೊಟ್ಟು ಚಳವಳಿಯಲ್ಲಿ ಭಾಗಿಯಾದರು. ಮಹಾದೇವರನ್ನು ಅವರ ಸಂಗಡಿಗರೊಂದಿಗೆ ಬ್ರಿಟಿಷರು ಬಂಧಿಸಿದರು. 1942ರ ಆಗಸ್ಟ್​ನಲ್ಲಿ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆಯಿತು. ಬ್ರಿಟಿಷರ ವಿರುದ್ಧ ಆಕ್ರೋಶಗೊಂಡಿದ್ದ ಮೈಲಾರ ಮಹದೇವಪ್ಪ ಮತ್ತು ಅವರ ತಂಡ, ಕಂದಾಯ ವಸೂಲಿ ಕೇಂದ್ರದ ಮೇಲೆ ದಾಳಿ ಮಾಡುವ ಸಂಚು ರೂಪಿಸಿತು. ಹೊಸರಿತ್ತಿಯ ಕಂದಾಯ ಕಚೇರಿ ಮೇಲೆ ಮೈಲಾರ ಮಹಾದೇವ, ತಿರಕಪ್ಪ ಮಡಿವಾಳರ, ವೀರಯ್ಯ ಹಿರೇಮಠರು 1943ರ ಏಪ್ರಿಲ್ 1ರಂದು ದಾಳಿ ಮಾಡಿ ಅಲ್ಲಿಯ ವೀರಭದ್ರ ದೇವಸ್ಥಾನದಲ್ಲಿ ಸಂಗ್ರಹಿಸಿಟ್ಟಿದ್ದ ಹಣವನ್ನು ಲೂಟಿ ಮಾಡಲು ಮುನ್ನುಗ್ಗಿದರು. ಆಗ ಅಡಗಿ ಕುಳಿತಿದ್ದ ಬ್ರಿಟಿಷರ ಮಹಾಮೋಸದಿಂದ ಗುಂಡೇಟಿಗೆ ಬಲಿಯಾದರು. ಸ್ವಾತಂತ್ರ್ಯ ಹೋರಾಟದ ಇತಿಹಾಸದ ಪುಟಗಳಲ್ಲಿ ಈ ಮೂವರೂ ಇಂದಿಗೂ ಅಜರಾಮರವಾಗಿ ಉಳಿದಿದ್ದಾರೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಧುಮುಕಿದ್ದ ಹುತಾತ್ಮ ಮೈಲಾರ ಮಹದೇವಪ್ಪ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಅವರ ಅಂಚೆಚೀಟಿ ಬಿಡುಗಡೆ ಮಾಡುತ್ತಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.

ಮೈಲಾರ ಮಹದೇವಪ್ಪ ಅವರ ಅಂಚೆ ಚೀಟಿಯನ್ನು ಸೆ. 3ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಕೇಂದ್ರ ಸಂಪರ್ಕ ಖಾತೆ ಸಚಿವ ಮನೋಜ್ ಸಿನ್ಹಾ ಅವರು ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ನಮ್ಮ ನೆಲದ ಮಹಾನ್ ಪುರುಷನ ಕುರಿತು ರಾಷ್ಟ್ರಕ್ಕೆ ತಿಳಿಸುವ ಕಾರ್ಯ ಅಂಚೆಚೀಟಿ ಬಿಡುಗಡೆಯಿಂದ ಆಗಲಿದೆ. ಅಂಚೆ ಇಲಾಖೆಯು ಮೈಲಾರ ಮಹದೇವಪ್ಪ ಅವರ ಸ್ಮರಣೆಗಾಗಿ ಹಾಗೂ ಅವರಿಗೆ ನಿಜವಾದ ಗೌರವ ನೀಡುವ ನಿಟ್ಟಿನಲ್ಲಿ ಅಂಚೆಚೀಟಿ ಬಿಡುಗಡೆ ಮಾಡುತ್ತಿರುವುದು ಸಂತಸ ತಂದಿದೆ.

| ಸತೀಶ ಕುಲಕರ್ಣಿ, ಸದಸ್ಯರು, ಮೈಲಾರ ಮಹದೇವಪ್ಪ ಸ್ಮಾರಕ ಟ್ರಸ್ಟ್

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...