More

    ಮೇ 1 ರಿಂದ ಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಅಂಚೆ ಮತದಾನ 

    ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ನಡೆಯುತ್ತಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಬುಧವಾರದಿಂದ ಮೂರು ದಿನ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

    14 ಲೋಕಸಭಾ ಕ್ಷೇತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದ್ದು, ಬುಧವಾರದಿಂಧ ಮೇ 3ರವರೆಗೆ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.

    ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದೆ. ಅರ್ಹ ಮತದಾರರು ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

    ಎಲ್ಲೆಲ್ಲಿ ಮತ ಕೇಂದ್ರ ಸ್ಥಾಪನೆ?:

    ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts