More

    ನಾಳೆಯಿಂದ ಮನೆಯಿಂದಲೇ ಅಂಚೆ ಮತದಾನ

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನೋಂದಾಯಿಸಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಿದ್ದು, ಶನಿವಾರದಿಂದ (ಏ.13) ಆರು ದಿನ ಮತ ಚಲಾವಣೆ ಮಾಡಬಹುದಾಗಿದೆ.

    ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ – ಈ 3 ಕ್ಷೇತ್ರಗಳಲ್ಲಿ ಅಂಚೆ ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ (ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯ ಉಳ್ಳವರು) ಅಂಚೆ ಮತದಾನಕ್ಕೆ ಅರ್ಹರಾಗಿದ್ದಾರೆ.

    ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 ಮಂದಿ 85 ವರ್ಷ ಮೇಲ್ಪಟ್ಟ ಹಾಗೂ 22,222 ಮಂದಿ ಅಂಗವಿಕಲರನ್ನು ಗುರುತಿಸಲಾಗಿದೆ. ಈ ಪೈಕಿ ಕ್ರಮವಾಗಿ 6,206 ಮಂದಿ 85 ಪ್ಲಸ್ ಹಾಗೂ 201 ಅಂಗವಿಕಲ ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಹೆಸರು ನೋಂದಣಿ ಮಾಡಿಕೊಂಡಿರುವ ಮತದಾರರಿಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಮನೆಯಲ್ಲೂ ಗೌಪ್ಯ ಮತದಾನಕ್ಕೆ ವ್ಯವಸ್ಥೆ:

    ಮತದಾರರ ನಿವಾಸಕ್ಕೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನದ ಗುರುತಿನ ಚೀಟಿಯನ್ನು ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆಯನ್ನು ವೀಡಿಯೋ ಚಿತ್ರೀಕರಣದ ಮೂಲಕ ಸೆರೆ ಹಿಡಿಯಲಾಗುತ್ತದೆ.

    ಇದರ ಹೊರತಾಗಿಯೂ ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುವರು. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

    85 ಪ್ಲಸ್ ಮತದಾರರ ಕ್ಷೇತ್ರವಾರು ವಿವರ:
    ಕ್ಷೇತ್ರದ ಹೆಸರು ಅರ್ಹರು ನೋಂದಣಿ
    ಬೆಂಗಳೂರು ಉತ್ತರ 33,165 9,936
    ಬೆಂಗಳೂರು ದಕ್ಷಿಣ 33,500 3,927
    ಬೆಂಗಳೂರು ಕೇಂದ್ರ 28,463 8,359
    ಒಟ್ಟು ಮತದಾರರು 95,128 22,222

    ಅಂಗವಿಕಲ ಮತದಾರರ ಕ್ಷೇತ್ರವಾರು ವಿವರ:
    ಕ್ಷೇತ್ರದ ಹೆಸರು ಅರ್ಹರು ನೋಂದಣಿ
    ಬೆಂಗಳೂರು ಉತ್ತರ 1,975 87
    ಬೆಂಗಳೂರು ದಕ್ಷಿಣ 2,469 54
    ಬೆಂಗಳೂರು ಕೇಂದ್ರ 1,762 60
    ಒಟ್ಟು ಮತದಾರರು 6,206 201

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts