ಬೆಳಾಲು ಪ್ರೌಢಶಾಲೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

New Project (44)
Published on

ಬೆಳ್ತಂಗಡಿ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥ ಅನುದಾನಿತ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯನ್ನು ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಎನ್. ಉದ್ಘಾಟಿಸಿದರು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಅಂಕಿತಾ ಮತ್ತು ಸೃಜನ್ಯಾ ದಿನದ ವಿಶೇಷತೆ ಕುರಿತು ಮಾತನಾಡಿದರು. ಯೋಗ ದಿನಾಚರಣೆಯ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ಭವಾನಿ ಮಾರ್ಪಾಲು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಕಾರ್ಯಕ್ರಮ ಸಂಘ ಟಿಸಿದರು. ವಿದ್ಯಾರ್ಥಿಗಳಾದ ತ್ರಿಷಾ ಜೈನ್ ಸ್ವಾಗತಿಸಿದರು. ರಕ್ಷಾ ಕೆ. ನಿರೂಪಿಸಿದರು. ಫಾತಿಮತ್ ಝೂಹಮ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net