ಕಾಗವಾಡ: ಕೊಂಕಣ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ತಾಲೂಕಿನ ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿದೆ. ಅಧಿಕಾರಿಗಳು ಸಂಭಾವ್ಯ ಪ್ರವಾಹ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ತಾಲೂಕು ನೋಡಲ್ ಅಧಿಕಾರಿ ಎಚ್.ಡಿ. ಕೋಳೆಕರ ಹೇಳಿದರು.

ಪಟ್ಟಣದ ಪ್ರವಾಸಿ ಮಂದರಿದಲ್ಲಿ ಸಂಭಾವ್ಯ ಪ್ರವಾಹ ಮುನ್ನಚ್ಚರಿಕೆ ಕುರಿತು ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನ ಪ್ರವಾಹ ಭೀತಿ ಎದುರಿಸುತ್ತಿರುವ ಗ್ರಾಮಗಳ ನೋಡಲ್ ಅಧಿಕಾರಿಗಳು, ಆಯಾ ಗ್ರಾಮಗಳ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಎಚ್ಚರವಹಿಸಬೇಕು ಎಂದರು.
ತಹಸೀಲ್ದಾರ್ ರಾಜೇಶ ಬುರ್ಲಿ ಮಾತನಾಡಿ, ಇಲ್ಲಿಯ ವರೆಗೆ ಕಾಗವಾಡ ತಾಲೂಕಿನಲ್ಲಿ ಡೆಂೆ ಪ್ರಕರಣಗಳು ಪತ್ತೆಯಾಗಿಲ್ಲ. ಪಿಡಿಒ, ಸ್ಥಳೀಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ತಾಪಂ ಎಒ ಈರಣ್ಣ ವಾಲಿ ಎಲ್ಲ ಗ್ರಾಮ ಅಭಿವೃದ್ಧಿ ಅಧಿಕಾರಿಗಳಿಗೆ ಸಂಭಾವ್ಯ ಪ್ರವಾಹ ಮತ್ತು ಡೆಂೆ ಕುರಿತು ಸಲಹೆ ನೀಡಿದರು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.