More

    ಪೌರಕಾರ್ಮಿಕರು ಸ್ವಚ್ಛತೆ ಕಾಪಾಡುವ ಸಿಪಾಯಿಗಳು: ಶಾಸಕ ರವಿಕುಮಾರ್ ಗಣಿಗ ಬಣ್ಣನೆ

    ಮಂಡ್ಯ: ನಗರ ಹಾಗೂ ಇಡೀ ಊರನ್ನೇ ಸ್ವಚ್ಛವಾಗಿಡುವ ಪೌರಕಾರ್ಮಿಕ ದಿನಾಚರಣೆ ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವದಷ್ಟೇ ಪ್ರಮುಖವಾಗಿದೆ. ಅವರು ಸ್ವಚ್ಛತೆ ಕಾಪಾಡುವ ಸಿಪಾಯಿಗಳು ಎಂದು ಶಾಸಕ ರವಿಕುಮಾರ್ ಗಣಿಗ ಬಣ್ಣಿಸಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಪೌರಕಾರ್ಮಿರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಇಲ್ಲ ಎಂದರೆ ನಗರವು ಇಷ್ಟು ಸ್ವಚ್ಛವಾಗಿ ಕಾಣುತ್ತಿರಲಿಲ್ಲ. ಪೌರಕಾರ್ಮಿಕರಿಗೆ ಸರ್ಕಾರ 18 ಸಾವಿರ ರೂ ಮಾಸಿನ ವೇತನ ನೀಡುತ್ತಿದೆ. ಜಿಲ್ಲೆಯ 100 ಜನ ಪೌರಕಾರ್ಮಿಕರು ಖಾಯಂ ಆಗಿದ್ದು, ಉಳಿದ 200 ಜನರನ್ನು ಹಂತ ಹಂತವಾಗಿ ಖಾಯಂ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಪೌರಕಾರ್ಮಿಕರು ಸ್ವಚ್ಛತಾ ಕೆಲಸದಲ್ಲಿ ಸದಾ ತೊಡಗಿರುತ್ತಾರೆ. ಈ ಹಿನ್ನಲೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ನಾವು ವಾಸಿಸುವ ಸ್ಥಳಗಳು ಸ್ವಚ್ಛತೆ ಕಾಪಾಡಲು ದುಡಿಯುವ ಪೌರಕಾರ್ಮಿಕರನ್ನು ಹಾಗೂ ಅವರ ವೃತ್ತಿಯನ್ನು ಗೌರವದಿಂದ ಕಾಣಬೇಕು. ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸದೃಢರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.
    ಸರ್ಕಾರದ ವತಿಯಿಂದ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಆನೇಕ ಯೋಜನೆಗಳನ್ನು ರೂಪಿಸಲಾಗಿದೆ. ವಸತಿ ರಹಿತರಿಗೆ ಗೃಹಭಾಗ್ಯ ಯೋಜನೆಯಡಿ ಸುಮಾರು 85ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ. 7.50 ಲಕ್ಷ ರೂ ಮನೆ ನಿರ್ಮಾಣಕ್ಕೆ ನೀಡಲಾಗುವುದು. ಇನ್ನೂ 15 ಫಲಾನುಭವಿಗಳಿಗೆ ಗೃಹಭಾಗ್ಯ ಯೋಜನೆ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿವೇಶನ ರಹಿತರಿಗೆ ನಿವೇಶನ ಒದಗಿಸಿ ಹಕ್ಕು ಪತ್ರ ನೀಡಿ ನಂತರ ಗೃಹಭಾಗ್ಯ ಯೋಜನೆ ಒದಗಿಸಲಾಗುವುದು. ಪೌರಕಾರ್ಮಿಕರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
    ನಗರಸಭೆ ಸದಸ್ಯರಾದ ಅರುಣ್‌ಕುಮಾರ್, ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ಸಾಮಾಜಿಕ ಹೋರಾಟಗಾರ ಎಂ.ಬಿ.ನಾಗಣ್ಣಗೌಡ ಇತರರಿದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts