More

    ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಯೋಜನೆಗಳ ಜಾರಿ

    ರಾಯಚೂರು: ಹಸಿವು ಮುಕ್ತ ಕರ್ನಾಟಕ ನಿರ್ಮಾಣ ರಾಜ್ಯ ಸರ್ಕಾರದ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟಿನ್ ಹಾಗೂ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

    ನಗರದ ಎಪಿಎಂಸಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಭಾನುವಾರ ಭೇಟಿ ನೀಡಿ ಮಾತನಾಡಿದರು. ಕಡಿಮೆ ದರದಲ್ಲಿ ಜನರಿಗೆ ಆಹಾರ ಒದಗಿಸುವ ಯೋಜನೆ ಜಾರಿಗೆ ತರುವ ಮೂಲಕ ಲಕ್ಷಾಂತರ ಜನರ ಹಸಿವು ನೀಗಿಸಲಾಗುತ್ತಿದೆ. ಬಡತನ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು. ಹಲವು ತಿಂಗಳ ವೇತನ ಬಾಕಿಯಿದ್ದು, ಪಾವತಿಸುವಂತೆ ಸಚಿವಗೆ ಬೋಸರಾಜುಗೆ ಕ್ಯಾಂಟಿನ್ ಸಿಬ್ಬಂದಿ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts