ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

vaishnavi
ವೈಷ್ಣವಿ
Published on

ಗಂಗೊಳ್ಳಿ: ಸಾಲಿಗ್ರಾಮ ಖಚಿತಿ ಫಿಟ್ನೆಸ್ ವತಿಯಿಂದ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್‌ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್, ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದು, ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ. ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಸತೀಶ್ ಖಾರ್ವಿ ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net