More

    ವಿದ್ಯುತ್ ದರ ಯುನಿಟ್‌ಗೆ 167 ಪೈಸೆ ಏರಿಕೆ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮೆಸ್ಕಾಂ ಪ್ರಸ್ತಾವನೆ

    ಮಂಗಳೂರು: ದ.ಕ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ 943.26 ಕೋಟಿ ರೂ. ಕಂದಾಯ ಕೊರತೆ ಉಂಟಾಗಿದೆ. ಇದನ್ನು ಸರಿದೂಗಿಸಲು ಯುನಿಟ್‌ಗೆ ಸರಾಸರಿ 1 ರೂ. 67 ಪೈಸೆ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮೆಸ್ಕಾಂ ಕೋರಿಕೆ ಸಲ್ಲಿಸಿದೆ.
    ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಶಂಭುದಯಾಳ್ ಮೀನಾ ವಿದ್ಯುತ್ ದರ ಪರಿಷ್ಕರಣೆ ಕುರಿತು ಆಯೋಜಿಸಿದ ವಿಚಾರಣೆ ಸಭೆಯಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಈ ಪ್ರಸ್ತಾವನೆ ಮಂಡಿಸಿದರು.

    2021-22ನೇ ಸಾಲಿನಲ್ಲಿ ಮೆಸ್ಕಾಂ 4176.35 ಕೋಟಿ ರೂ. ಕಂದಾಯ ನಿರೀಕ್ಷಿಸಿದೆ. ಆದರೆ ವೆಚ್ಚ 5119.61 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರಿಂದ ಉಂಟಾಗುವ 943.26 ಕೋ.ರೂ. ಕಂದಾಯ ಕೊರತೆ ಸರಿದೂಗಿಸಲು ಪ್ರತಿ ಯುನಿಟ್‌ಗೆ 1.67 ರೂ. ದರ ಏರಿಕೆ ಅನಿವಾರ್ಯವಾಗಿದೆ ಎಂದು ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು. ನಾಲ್ಕು ಜಿಲ್ಲೆಗಳ ರೈತರು, ಕೈಗಾರಿಕೋದ್ಯಮಿಗಳು, ಸಾರ್ವಜನಿಕ ಗ್ರಾಹಕರಿಂದ ಮೆಸ್ಕಾಂನ ಈ ದರ ಏರಿಸುವ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತವಾಯಿತು. ಆಯೋಗದ ಸದಸ್ಯರಾದ ಎಚ್.ಎನ್.ಮಂಜುನಾಥ್, ಎಂ.ಡಿ.ರವಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts