More

    ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

    ಗೋಕಾಕ: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ನಿರ್ಧಾರ ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅವೈಜ್ಞಾನಿಕವಾಗಿದೆ. ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

    ಜನರು ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 45 ಪೈಸೆ ಹೆಚ್ಚಳ ಮಾಡಿದ್ದು ಖಂಡನೀಯ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ವಿವೇಕ ಜತ್ತಿ, ಪ್ರಕಾಶಪ್ರಭು ಡಾಂಗೆ, ಪರಸಪ್ಪ ತಿಮ್ಮಯ್ಯನವರ, ಮಂಜುಳಾ ರಾಮಗಾನಟ್ಟಿ, ಜಯಶ್ರೀ ಮಾಳಗಿ, ಮುನ್ನಾ ಖತೀಬ್, ನೇಹಾಲ ಹೂಲಿಕಟ್ಟಿ, ಉದಯ ತಳವಾರ, ಈರಣ್ಣ, ರಮೇಶ ಕೆಂಪಣ್ಣವರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts