ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಸಿಎಂ ಬಸವರಾಜ ಬೊಮ್ಮಾಯಿ

blank

ಬೆಂಗಳೂರು: ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ “ಬಾಂಧವ್ಯ ಬೆಳೆಸೋಣ” ವಾಕಥಾನ್​ಗೆ ಅವರು ಚಾಲನೆ ನೀಡಿ ಮಾತನಾಡಿದರು.

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದ ಅವರು ಹೃದಯಾಘಾತ ಆದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದರು.

ಶೇ 60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ 25 ರಷ್ಟು ಸಾವುಗಳು ಹೃದಯರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಲಹೆ ನೀಡಿದರು.

ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಮುಖ್ಯಮಂತ್ರಿಗಳು ಕೈಗೊಂಡರು. . ವ್ಯಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್,ಸಂಸದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

ಉತ್ತಮ ಜೀವನಶೈಲಿಯೇ ಪರಿಹಾರ: ಆರೋಗ್ಯವಂತ ಹೃದಯಕ್ಕೆ ತಾಳ್ಮೆ, ನಂಬಿಕೆ, ನಗು ಅಗತ್ಯ

ಪೋಡಿ ಸಿಗದೆ ಹಿಡಿಶಾಪ: ಭ್ರಷ್ಟ ಅಧಿಕಾರಿಗಳಿಂದ ರೈತರಿಗೆ ಪ್ರಯಾಸ; ಲಂಚ ಕೊಟ್ಟರಷ್ಟೇ ಕೆಲಸ..

ಒಂದೇ ಒಂದು ಜವಾನನ ಕೆಲಸಕ್ಕಾಗಿ ಸಲ್ಲಿಕೆಯಾದ ಅರ್ಜಿಗಳ ಒಟ್ಟು ಸಂಖ್ಯೆ ಕೇಳಿದ್ರೆ ಬೆರಗಾಗ್ತೀರಿ..!

ವ್ಯವಸ್ಥೆ ಸುಧಾರಿಸಿ; ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಕ್ತ ಸೌಲಭ್ಯ ಅಗತ್ಯ

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…