25.7 C
Bangalore
Sunday, December 15, 2019

ಕರಾವಳಿಯ ಶಕ್ತಿಕೇಂದ್ರದಲ್ಲಿ ಬಿಜೆಪಿ ದಿಗ್ವಿಜಯ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ವೇಣುವಿನೋದ್ ಕೆ.ಎಸ್. ಮಂಗಳೂರು
ಹಳೆಯ ಮುಖಗಳಿಗೇ ಮಣೆ ಹಾಕುವ ಬದಲು ಹೊಸಬರು, ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ನೀಡಿದ್ದು, ಸೀಮಿತ ಕಾಲಾವಕಾಶದಲ್ಲಿ ಶಾಸಕರಿಬ್ಬರ ನೇತೃತ್ವದಲ್ಲಿ ವ್ಯವಸ್ಥಿತ, ಸ್ಥಳೀಯ ವಿಚಾರಗಳನ್ನೆತ್ತಿಕೊಂಡು ಪ್ರಚಾರ ನಡೆಸಿದ್ದು, ಕೇಂದ್ರ-ರಾಜ್ಯ ಎರಡೂ ಕಡೆ ಇರುವ ತಮ್ಮದೇ ಸರ್ಕಾರದ ಬೆಂಬಲ, ಇತ್ತೀಚೆಗಷ್ಟೇ ಪ್ರಕಟಗೊಂಡ ಅಯೋಧ್ಯಾ ತೀರ್ಪು..

ಇವು ಮಂಗಳೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಹಿಂದೆ ವರ್ಕ್ ಔಟ್ ಆಗಿರುವ ಪ್ರಮುಖಾಂಶಗಳು.
ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಕೇವಲ 11 ಮಂದಿ ಮಾತ್ರ 2 ಅಥವಾ ಅದಕ್ಕಿಂತ ಹೆಚ್ಚು ಬಾರಿ ಮನಪಾ ಸದಸ್ಯರಾಗಿ ಆಯ್ಕೆಯಾದ ಅನುಭವದವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಉಳಿದ 49 ಮಂದಿಯೂ ಹೊಸಬರು! ಜನರಲ್ಲಿ ಹೊಸ ಭರವಸೆ ಮೂಡಿಸುವಲ್ಲಿ ಇದು ಸಫಲವಾಗಿದ್ದು, ಪಕ್ಷದ ಕಾರ್ಯಕರ್ತರಿಗೆ ತಮಗೂ ಪಕ್ಷ ಅವಕಾಶ ನೀಡುತ್ತಿದೆ ಎಂಬ ಹುರುಪು ಸಹಜವಾಗಿಯೇ ಮೂಡಿದೆ.

ಕಾಂಗ್ರೆಸ್ 21 ಮಂದಿ ಹಳಬರಿಗೆ ಅವಕಾಶ ನೀಡಿತ್ತು, ಇದರಲ್ಲಿ ಒಬ್ಬರು 7ನೇ ಬಾರಿ, ಒಬ್ಬರು 5ನೇ ಬಾರಿ, ಇಬ್ಬರು 4 ಬಾರಿ, ಉಳಿದವರು 3 ಅಥವಾ 2 ಬಾರಿ ಸದಸ್ಯರಾದವರು. ಈ 21 ಮಂದಿಯಲ್ಲಿ ಪುನರಾಯ್ಕೆಯಾದವರು 11 ಮಂದಿ ಮಾತ್ರ. ಅದೇ ಹೊತ್ತಿಗೆ ಕಾಂಗ್ರೆಸ್ 39 ಮಂದಿ ಹೊಸಬರಿಗೆ ಅವಕಾಶ ನೀಡಿದ್ದು, ಇವರಲ್ಲಿ ಗೆದ್ದವರು ಕೇವಲ ಮೂರು ಮಂದಿ ಎನ್ನುವುದು ಗಮನಾರ್ಹ.

 ಮೀಸಲಾತಿ ತಂತ್ರ ಉಲ್ಟಾ: ಈ ಬಾರಿ ಮನಪಾ ಚುನಾವಣೆಗೆ ಅನ್ವಯವಾಗುವಂತೆ ಹಿಂದಿನ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರ ಮೀಸಲಾತಿಯಲ್ಲಿ ಭಾರಿ ಬದಲಾವಣೆ ತಂದಿತ್ತು. ಇದರಿಂದಾಗಿ ಅನೇಕ ಪ್ರಮುಖ ಬಿಜೆಪಿ ಮಾಜಿ ಕಾರ್ಪೊರೇಟರುಗಳಿಗೆ ಅವರ ವಾರ್ಡ್‌ನಲ್ಲಿ ಸ್ಪರ್ಧಿಸಲು ಆಗಿರಲಿಲ್ಲ. ಇದಕ್ಕೆ ತಡೆಯಾಜ್ಞೆ ತರುವುದಕ್ಕೆ ಬಿಜೆಪಿ ಯತ್ನಿಸಿದರೂ ಯಶಸ್ವಿಯಾಗಲಿಲ್ಲ, ಕೊನೆಗೆ ಅದೇ ಮೀಸಲಾತಿಯಲ್ಲೇ ಸ್ಪರ್ಧಿಸಬೇಕಾಯಿತು. ಆದರೆ ಅದು ಈಗ ಕಾಂಗ್ರೆಸ್‌ಗೆ ಉಲ್ಟಾ ಹೊಡೆದಿದೆ.

  •  ಯಾರಿಗೆ ಎಷ್ಟು?:
    ಬಿಜೆಪಿ 44
    ಕಾಂಗ್ರೆಸ್ 14
    ಎಸ್‌ಡಿಪಿಐ 2
    ಒಟ್ಟು 60

 ಸಚಿವರು, ಇಬ್ಬರು ಶಾಸಕರ ನೇತೃತ್ವ: ಮಂಗಳೂರು ನಗರ ದಕ್ಷಿಣ ಮತ್ತು ಉತ್ತರದ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ವೈ.ಭರತ್ ಶೆಟ್ಟಿ ಅಭ್ಯರ್ಥಿಗಳ ಆಯ್ಕೆಯಿಂದ ತೊಡಗಿ, ಪ್ರಚಾರ ರೂಪಿಸುವಲ್ಲಿ ವರೆಗೂ ಬೆನ್ನಿಗೆ ನಿಂತಿದ್ದರು. ಮನೆ ಮನೆ ಭೇಟಿ ಪ್ರಚಾರ ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಪ್ರಚಾರದಲ್ಲಿ ಭಾಗವಹಿಸಿದ್ದಾರೆ.

ರಾಜ್ಯಾಧ್ಯಕ್ಷರ ಪ್ರಥಮ ಪರೀಕ್ಷೆ: ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿದ ಬಳಿಕ ಮೊದಲ ಬಾರಿಗೆ ನಡೆಯುತ್ತಿರುವ ಚುನಾವಣೆ ಇದು. ತಮ್ಮ ತವರಿನಲ್ಲೇ ನಡೆದ ಈ ಪರೀಕ್ಷೆಯಲ್ಲಿ ಪಕ್ಷದ ನಿರ್ವಹಣೆ ಅವರಿಗೆ ಖುಷಿ ತಂದಿದೆ. ಬಿಡುವಿಲ್ಲದ ತಮ್ಮ ರಾಜ್ಯ ಪ್ರವಾಸ, ದೆಹಲಿ ಪ್ರವಾಸಗಳ ನಡುವೆ ಕೆಲದಿನ ನಳಿನ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

 ಮೇಯರ್ ಮೀಸಲಾತಿ ಏನಾಗುವುದೋ?: ಮಂಗಳೂರು ಸೇರಿದಂತೆ 11 ಮಹಾನಗರಪಾಲಿಕೆಗಳಿಗೆ 2018ರ ಸೆ.3ರಂದೇ ಸರ್ಕಾರ ಮೇಯರ್/ಉಪಮೇಯರ್ ಮೀಸಲಾತಿ(2018-19) ಹೊರಡಿಸಿತ್ತು. ಇದರಂತೆ ಮಂಗಳೂರು ಮೇಯರ್‌ಗೆ ಹಿಂದುಳಿದ ಜಾತಿ ಎ ಹಾಗೂ ಉಪಮೇಯರ್‌ಗೆ ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಯಾಗಿದೆ. ಇದರ ಪ್ರಕಾರ ಮೇಯರ್ ಆಗಲು ಅರ್ಹತೆ ಇರುವವರು ದಿವಾಕರ್ ಮಾತ್ರ. ಸಾಮಾನ್ಯ ಮಹಿಳೆಯರಲ್ಲಿ ಅನೇಕರು ಅರ್ಹರು. ಆದರೆ ಈ ಮೀಸಲಾತಿಯನ್ನು ಈಗಿನ ಸರ್ಕಾರ ಒಪ್ಪಿಕೊಳ್ಳುತ್ತದೆಯೇ ಅಥವಾ ಹೊಸದಾಗಿ ಮೀಸಲಾತಿ ಪ್ರಕಟಿಸುತ್ತದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ‘ವಿಜಯವಾಣಿ’ಗೆ ಪ್ರತಿಕ್ರಿಯಿಸಿದ ಶಾಸಕ ವೇದವ್ಯಾಸ ಕಾಮತ್, ಪಕ್ಷದ ಹಿರಿಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು, ಈಗಲೇ ಏನೂ ಹೇಳಲಾಗದು ಎಂದಿದ್ದಾರೆ.

ನಿಜವಾಯ್ತು ಪೂಜಾರಿ ಭವಿಷ್ಯ!: ಮನಪಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಭವಿಷ್ಯ ನುಡಿದಿದ್ದರು. ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅದು ನಿಜವಾಗಿದೆ. ತಕ್ಷಣಕ್ಕೆ ಫಲಿತಾಂಶ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಪೂಜಾರಿ ನಿರಾಕರಿಸಿದ್ದು, ಎರಡು ದಿನಗಳ ಬಳಿಕ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಿಜೆಪಿ ವಿಜಯೋತ್ಸವದಲ್ಲಿ ಮುಸ್ಲಿಂ ಧ್ವಜ!: ಮನಪಾ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಬಿಜೆಪಿ ಬಾವುಟದೊಂದಿಗೆ ಮುಸ್ಲಿಮರ ಹಸಿರು ಧ್ವಜ, ಬಿಳಿ ಧ್ವಜ ಹಾಗೂ ಭಗವಾದ್ವಜ ಈ ಎಲ್ಲವನ್ನೂ ಹಿಡಿದುಕೊಂಡಿರುವುದು ಕುತೂಹಲಕ್ಕೆ ಕಾರಣವಾಯಿತು.
ಜೀಪು, ಕಾರುಗಳಲ್ಲಿ ವಿವಿಧ ಧ್ವಜವನ್ನು ಒಟ್ಟಿಗೆ ಹಿಡಿದು ಸಾಗುತ್ತಿರುವುದು, ವಾದ್ಯಕ್ಕೆ ಕುಣಿಯುವುದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಂಡಿವೆ. ವಾಮಂಜೂರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಸರ್ವ ಧರ್ಮ ಸಮಾನತೆಯನ್ನು ಸಾರುವ ಉದ್ದೇಶದಿಂದ ಈ ರೀತಿ ಧ್ವಜಗಳನ್ನು ಪ್ರದರ್ಶಿಸಲಾಯಿತು ಎಂದು ತಿಳಿದುಬಂದಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ಮಂಗಳೂರು ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಬರಬೇಕು ಎಂಬ ನೆಲೆಯಲ್ಲಿ ಪಕ್ಷದ ಮೇಲೆ ವಿಶ್ವಾಸವಿಟ್ಟು ಜನತೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆ ಆಶಯಕ್ಕೆ ತಕ್ಕಂತೆ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದ್ದು, ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ.
– ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ

ಕಳೆದ ಕಾಂಗ್ರೆಸ್ ಆಡಳಿತದ ಜನವಿರೋಧಿ ನೀತಿಯಿಂದ ಬೇಸತ್ತ ಜನರು ತಕ್ಕ ಪಾಠ ಕಲಿಸಿದ್ದಾರೆ. ಮಂಗಳೂರಿನ ಜನರಿಗೆ ಪೊಳ್ಳು ಭರವಸೆಗಳು ಬೇಕಿಲ್ಲ. ಅವರು ಬಯಸುವುದು ಅಭಿವೃದ್ಧಿ ಮಾತ್ರ. ನಂಬಿಕೆ ಹುಸಿಯಾಗದಂತೆ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಮಾತನ್ನು ಉಳಿಸಿಕೊಳ್ಳುತ್ತೇವೆ.
– ವೇದವ್ಯಾಸ ಕಾಮತ್ ಶಾಸಕ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾರ್ಯಕರ್ತರ ಸತತ ಪರಿಶ್ರಮ, ಪಕ್ಷಕ್ಕಾಗಿ ಬೆವರನ್ನು ರಕ್ತವಾಗಿಸಿ ದುಡಿದ ಪ್ರತಿಫಲ ಇವತ್ತು ಪಾಲಿಕೆ ಬಿಜೆಪಿ ತೆಕ್ಕೆಗೆ ಬರಲು ಸಾಧ್ಯವಾಗಿದೆ. ಜನತೆಗೆ ನೀಡಿದ ಆಶೋತ್ತರಗಳಿಗೆ ಬಿಜೆಪಿಯ ಎಲ್ಲ ಸದಸ್ಯರು ಸ್ಪಂದನೆ ನೀಡುವ ವಿಶ್ವಾಸವಿದೆ. ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
– ಡಾ.ವೈ.ಭರತ್ ಶೆಟ್ಟಿ ಶಾಸಕ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...