More

    ಶೂಟಿಂಗ್​ ಶುರುವಾಗುವುದಕ್ಕೂ ಮುನ್ನವೇ ‘ಆದಿಪುರುಷ್’ ರಿಲೀಸ್ ದಿನಾಂಕ ಪ್ರಕಟ

    ಮುಂಬೈ: ಪ್ರಭಾಸ್​ ಅಭಿನಯದ ‘ಆದಿಪುರುಷ್​’ ಚಿತ್ರದ ಚಿತ್ರೀಕರಣ ಪ್ರಾರಂಭವಾಗುವುದು ಮುಂದಿನ ವರ್ಷವೇ ಆದರೂ, ಈಗಾಗಲೇ ತೆರೆಮರೆಯಲ್ಲಿ ಕೆಲಸಗಳು ಪ್ರಾರಂಭವಾಗಿದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೂ ಅಂತಿಮ ಹಂತದಲ್ಲಿದ್ದು, ಇನ್ನೇನು ಆ ಮಾಹಿತಿಯನ್ನೂ ಶೀಘ್ರದಲ್ಲಿ ಹೇಳಿಕೊಳ್ಳಲಿದೆ ತಂಡ. ಇದೀಗ ಸಿನಿಮಾ ಸೆಟ್ಟೇರುವ ಮುನ್ನವೇ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿಕೊಂಡಿದೆ.

    ಹೌದು, ಜನವರಿಯಿಂದ ಸಿನಿಮಾ ಶೂಟಿಂಗ್​ ಆರಂಭವಾಗಲಿದೆ. ಡಿಸೆಂಬರ್​ ಒಳಗೆ ಚಿತ್ರೀಕರಣ ಮುಗಿಸಿಕೊಂಡು, 2022ರ ಆಗಸ್ಟ್ 11ರಂದು ಸಿನಿಮಾ ಬಿಡುಗಡೆ ಆಗಲಿದೆಯೆಂದು ಚಿತ್ರತಂಡವೇ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದೆ. ಶೂಟಿಂಗ್​ನಲ್ಲಿ ಅತಿ ಹೆಚ್ಚಿನ ಪ್ರಮಾಣದ ಗ್ರಾಫಿಕ್ಸ್ ಇರಲಿದ್ದು, ಅದಕ್ಕಾಗಿಯೇ ಹೆಚ್ಚಿನ ಸಮಯವನ್ನು ತಂಡ ಮೀಸಲಿಡಬೇಕಿದೆ. ಚಿತ್ರದ ಒಟ್ಟಾರೆ ಬಜೆಟ್​ನಲ್ಲಿ ಅರ್ಧದಷ್ಟು ದುಡ್ಡನ್ನು ಬರೀ ವಿಎಫ್​ಎಕ್ಸ್​ಗೆ ಮೀಸಲಿಡಲಾಗುತ್ತಿದ್ದು, ಈ ಚಿತ್ರ ಯಾವ ಮಟ್ಟಿಗೆ ಮೂಡಿಬರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

    ಶೂಟಿಂಗ್​ ಶುರುವಾಗುವುದಕ್ಕೂ ಮುನ್ನವೇ ‘ಆದಿಪುರುಷ್’ ರಿಲೀಸ್ ದಿನಾಂಕ ಪ್ರಕಟಇದನ್ನೂ ಓದಿ: ಶಿವಣ್ಣ- ಧನಂಜಯ್ ಚಿತ್ರದ ಮುಹೂರ್ತಕ್ಕೆ ದಿನಾಂಕ ಫಿಕ್ಸ್

    ಮೂಲಗಳ ಪ್ರಕಾರ, ಚಿತ್ರ ಹಾಲಿವುಡ್​ ರೇಂಜ್​ನಲ್ಲಿ ಸಿನಿಮಾ ಮೂಡಿಬರಬೇಕು ಎನ್ನುವ ನಿಟ್ಟಿನಲ್ಲಿ ನಿರ್ದೇಶಕ ಓಂ ರೌತ್​, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ವಿಎಫ್​ಎಕ್ಸ್​ ತಂತ್ರಜ್ಱರನ್ನು ಈ ಚಿತ್ರಕ್ಕೆ ಕರೆಸುತ್ತಿದ್ದಾರಂತೆ. ಪ್ರಮುಖವಾಗಿ ‘ಗೇಮ್​ ಆಫ್​ ಥ್ರೋನ್ಸ್​’ಗೆ ಕೆಲಸ ಮಾಡಿದ್ದ ತಂತ್ರಜ್ಱರಿಂದ ಈ ಕೆಲಸ ಮಾಡಿಸಲಾಗುತ್ತದಂತೆ.

    ‘ಆದಿಪುರುಷ್​’ ಚಿತ್ರವು ರಾಮಾಯಣವನ್ನಾಧರಿಸಿದ್ದು, ಈ ಚಿತ್ರವನ್ನು ಟಿ-ಸೀರೀಸ್​ನ ಭೂಷಣ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರವನ್ನು ಮಾಡಿದರೆ, ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಕೃತಿ ಸನೂನ್​ ನಾಯಕಿ ಎಂದು ಹೇಳಲಾಗಿತ್ತಾದರೂ, ಅದಿನ್ನು ಅಧಿಕೃತವಾಗಿಲ್ಲ. ಇದೀಗ ಬಿಡುಗಡೆ ದಿನಾಂಕವನ್ನೂ ಘೋಷಿಸಿಕೊಂಡಿದೆ. (ಏಜೆನ್ಸೀಸ್​)

    ಭೋಜಪುರಿಗೆ ಹರ್ಷಿಕಾ; ಲಂಡನ್​ನಲ್ಲಿ ಇಡೀ ಚಿತ್ರದ ಚಿತ್ರೀಕರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts