'ಸಲಾರ್​' ಟ್ರೇಲರ್​ ರಿಲೀಸ್ ಡೌಟ್​? ಬಿಡುಗಡೆ ಸಮಯದಲ್ಲಿ ಬದಲಾವಣೆ!

ವಿಜಯವಾಣಿ (97)
Published on

ಬೆಂಗಳೂರು: ಟಾಲಿವುಡ್​ನ ರೆಬೆಲ್ ಸ್ಟಾರ್​ ಪ್ರಭಾಸ್​ ಮತ್ತು 'ಕೆಜಿಎಫ್' ಖ್ಯಾತಿಯ ಸ್ಟಾರ್​ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ 'ಸಲಾರ್'​ ರಿಲೀಸ್​ಗೆ ಇದೀಗ ದಿನಗಣನೆ ಆರಂಭಗೊಂಡಿದ್ದು, ಸದ್ಯ ಟ್ರೇಲರ್​ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತೀವ್ರ ಕಾತರದಿಂದ ಕಾಯುತ್ತಿದ್ದಾರೆ. ಇಂದು ಬಿಡುಗಡೆಯಾಗಬೇಕಿದ್ದ ಟ್ರೇಲರ್​ ಸಮಯದಲ್ಲಿ ಕೊಂಚ ಬದಲಾವಣೆ ಎದುರಾಗಿದ್ದು, ಈಗ ಹೊಸ ವೇಳೆಯನ್ನು ಚಿತ್ರತಂಡ ಘೋಷಿಸಿದೆ.

ಇತ್ತೀಚೆಗಷ್ಟೇ ‘ಸಲಾರ್​ ಭಾಗ 1’ ಸೀಸ್​ ಫೈರ್​ ಚಿತ್ರವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ಎ-ರೇಟ್ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು, ಇದೀಗ ಜಾಗತಿಕವಾಗಿ ಸಿನಿಪ್ರೇಕ್ಷಕರ ಮುಂದೆ ಅಬ್ಬರಿಸಲು ಸಕಲ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈ ಮಧ್ಯೆ ಪ್ರಭಾಸ್​ ಫ್ಯಾನ್ಸ್​ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಟ್ರೇಲರ್​ ಇಂದು ಬೆಳಗ್ಗೆ 10:42ಕ್ಕೆ ರಿಲೀಸ್ ಆಗಬೇಕಿತ್ತು. ಆದ್ರೆ, ಒಂದಷ್ಟು ಸಮಸ್ಯೆಗಳಿಂದ ಇದೀಗ ಸಮಯದಲ್ಲಿ ಬದಲಾವಣೆಯಾಗಿದೆ.

ಈ ಕುರಿತಂತೆ ಹೊಂಬಾಳೆ ಫಿಲಂಸ್​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿದ್ದು, 'ಸಲಾರ್'​ನ ಬಹುನಿರೀಕ್ಷಿತ ಟ್ರೇಲರ್​ ಇಂದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮುಂದೆ ಹಾಜರಾಗಲಿದೆ ಎಂದು ತಿಳಿಸಿದೆ. ಸದ್ಯ ಈ ಸುದ್ದಿ ಇದೀಗ ಪ್ರಭಾಸ್​ ಅವರ ಅಪಾರ ಸಂಖ್ಯೆಯ ಅಭಿಮಾನಿಗಳಲ್ಲಿ ನಿಟ್ಟುಸಿರು ಬಿಡುವಂತಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net