More

    ಗೋಹತ್ಯೆ ನಿಷೇಧ ಮಾಹಿತಿಗೆ ಕಡ್ಡಾಯ ಗ್ರಾಮಸಭೆ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸೂಚನೆ

    ಉಡುಪಿ: ಕೃಷಿ ಪ್ರಧಾನ ರಾಷ್ಟ್ರ ಭಾರತದಲ್ಲಿ ಗೋಮಾತೆಗೆ ದೇವರ ಸ್ಥಾನ ನೀಡಿದ್ದು, ಗೋರಕ್ಷಣೆ ನಮ್ಮೆಲ್ಲರ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಸಂಬಂಧಿಸಿ ಪ್ರತಿ ಗ್ರಾಮಗಳಲ್ಲಿ ಜನರಿಗೆ ಮಾಹಿತಿ ನೀಡುವ ಸಲುವಾಗಿ, ಪ್ರತ್ಯೇಕ ಗ್ರಾಮ ಸಭೆ ನಡೆಸಬೇಕು ಎಂದು ಪಶು ಸಂಗೋಪನೆ ಸಚಿವ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮಂಗಳವಾರ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದರ ಅನುಷ್ಠಾನ ಮಾಡುವ ಜವಾಬ್ದಾರಿ ಇಲಾಖೆ ಅಧಿಕಾರಿಗಳದ್ದಾಗಿದೆ. ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳು ಪ್ರತ್ಯೇಕ ಗ್ರಾಮಸಭೆಗಳನ್ನು ಆಯೋಜಿಸಿ ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಹೈನುಗಾರರ ಇತರೆ ಸಮಸ್ಯೆಗಳನ್ನು ಆಲಿಸಬೇಕು ಎಂದು ಸಚಿವ ಚವ್ಹಾಣ್ ಸಲಹೆ ನೀಡಿದರು.

    ವಕ್ಫ್ ಬೋರ್ಡ್ ಇಲಾಖೆ ಸಂಬಂಧಿಸಿ ಅಧಿಕಾರಿಗಳಿಂದ ವಿವರ ಪಡೆದುಕೊಂಡ ಸಚಿವರು, ಮಸೀದಿಗೆ ನೀಡುವ ಸರ್ಕಾರದ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆ ಶಾಸಕರಿಗೆ ಸಚಿವರು ತಿಳಿಸಿದರು.
    ಶಾಸಕ ಕೆ.ರಘುಪತಿ ಭಟ್, ಇಲಾಖೆ ವಿಶೇಷ ಅಧಿಕಾರಿ ಡಾ.ಜಯಪ್ರಕಾಶ್, ವಕ್ಫ್‌ಬೋರ್ಡ್ ಪ್ರಭಾರ ಅಧಿಕಾರಿ ಅನ್ವರ್ ಮುಸ್ತಾಫ ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts