More

    ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿಕೆ, ದೇವನಹಳ್ಳಿ ಕ್ರಿಡಾಂಗಣದಲ್ಲಿ ಧ್ವಜಾರೋಹಣ

    ಬೆಂಗಳೂರು ಗ್ರಾಮಾಂತರ: ದೇಶಕ್ಕೆ ಪ್ರಜಾಸತ್ತೆಯೇ ಸೂಕ್ತವೆಂದು ನಿರ್ಧರಿಸಿದ ಫಲವಾಗಿ ನಾವೆಲ್ಲ ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಈ ವ್ಯವಸ್ಥೆಯಲ್ಲಿ ಪ್ರಜೆಯೇ ಪ್ರಭು. ಆತನ ಏಳ್ಗೆಯೇ ಸರ್ಕಾರದ ಆದ್ಯ ಕರ್ತವ್ಯ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದರು.

    ದೇವನಹಳ್ಳಿ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾತನಾಡಿದರು. ಇಂಥ ವ್ಯವಸ್ಥೆಯಲ್ಲಿ 71 ವರ್ಷ ಕಾಲ ಸಾಗಿ ಬಂದಿರುವ ನಾವು, ದೇಶದ ಮುನ್ನಡೆಗೆ ಈ ವ್ಯವಸ್ಥೆ ನೀಡಿದ ಕಾಣಿಕೆಯನ್ನು ಮರೆಯಬಾರದು ಎಂದರು.

    ಮುನ್ನೂರು ವರ್ಷಗಳ ದಾಸ್ಯದ ಸರಪಳಿ ಕಳಚಿಕೊಂಡ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ವಿಶ್ವದಲ್ಲಿ ತಾನೂ ಒಂದು ಸಾರ್ವಭೌಮ ರಾಷ್ಟ್ರವೆಂದು ಸಾರಿದ ದಿನವೇ ಗಣರಾಜ್ಯೋತ್ಸವ ಎಂದು ಹೇಳಿದರು.

    ರಾಷ್ಟ್ರಗೀತೆಯೊಂದಿಗೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಾಯಿತು, ವಿವಿಧ ಪೊಲೀಸ್ ತುಕಡಿಗಳಿಂದ ಪಥ ಸಂಚಲನ ನಡೆಯಿತು. ಉಸ್ತುವಾರಿ ಸಚಿವರು ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷ ವಿ.ಪ್ರಸಾದ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts