More

  ಪ್ರಭು ಜಗನ್ನಾಥನೇ ಪ್ರಧಾನಿ ಮೋದಿಯ ಭಕ್ತ; ವಿವಾದದ ಕಿಡಿ ಹೊತ್ತಿಸಿದ ಸಂಬಿತ್​ ಪಾತ್ರಾ ಹೇಳಿಕೆ

  ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ನಿರತರಾಗಿದ್ದಾರೆ. ಇನ್ನೂ ಚುನಾವಣೆಯ ಸಮಯದಲ್ಲಿ ರಾಜಕೀಯ ನಾಯಕರು ಮಾತನಾಡುವ ಭರದಲ್ಲಿ ನೀಡುವ ಹೇಳಿಕೆಗಳು ವಿವಾದಕ್ಕೀಡಾಗಿ ತೋವ್ರ ಚರ್ಚೆಗೆ ಗ್ರಾಸವಾಗುತ್ತದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಂಬಿತ್​ ಪಾತ್ರಾ ನೀಡಿರುವ ಹೇಳಿಕೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

  ಒಡಿಶಾದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಮಾತನಾಡಿರುವ ಸಂಬಿತ್​ ಪಾತ್ರಾ ಪ್ರಭು ಜಗನ್ನಾಥನೇ ಪ್ರಧಾನಿ ಮೋದಿಯ ಭಕ್ತ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ.

  ಇದನ್ನೂ ಓದಿ: ದೇವೇಗೌಡರ ಮೇಲೆ ಅಭಿಮಾನ ಇದ್ದರೆ 48 ಗಂಟೆಯೊಳಗೆ ಶರಣಾಗು: ಎಚ್.ಡಿ. ಕುಮಾರಸ್ವಾಮಿ

  ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಪುರಿ ಜಗನ್ನಾಥನ ದೇವಾಲಯಕ್ಕೆ ಭೇಟಿ ನೀಡಿದ್ದು ನನಗೆ ತುಂಬಾ ಸಂತೋಷವಾಗಿದೆ. ಆ ಕ್ಷಣ ನಾನು ನನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ದೇಶದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿಯ ಕಾರ್ಯವೈಖರಿ ಕಂಡು ಪ್ರಭು ಜಗನ್ನಾಥನೇ ಪ್ರಧಾನಿ ಮೋದಿಯ ಭಕ್ತ ಆಗಿದ್ದಾನೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

  ಇತ್ತ ಸಂಬಿತ್​ ಪಾತ್ರಾ ಅವರ ಹೇಳಿಕೆ ವೈರಲ್​ ಆಗುತ್ತಿದ್ದಂತೆ ಕಾಂಗ್ರೆಸ್​ ನಾಯಕರು ಸೇರಿದಂತೆ ಅನೇಕರು ಕಿಡಿಕಾರಿದ್ದು, ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುತ್ತಿದ್ದ ವ್ಯಕ್ತಿ ಇಂದು ದೇವರ ಬಗ್ಗೆ ಮಾತನಾಡುವ ಮೂಲಕ ಅವಮಾನ ಮಾಡಿದ್ದಾರೆ. ಕೂಡಲೇ ಅವರ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts