More

    ಅರಸ ಮೇಲಲ್ಲ, ಅಗಸ ಕೀಳಲ್ಲ ಎಂದಿದ್ದ ಮಾಚಿದೇವ

    ಯಾದಗಿರಿ: ವಚನಗಳ ರಕ್ಷಕರಾದ ಮಡಿವಾಳ ಮಾಚಿದೇವರು ಅನುಭವ ಮಂಟಪಕ್ಕೆ ಬರುವ ಶರಣರನ್ನು ಬರಮಾಡಿಕೊಳ್ಳುವ ಕಾಯಕವು ಇಂದಿನ ವಿದೇಶಾಂಗ ಹಾಗೂ ರಕ್ಷಣಾ ಸಚಿವರ ಕಾಯಕದಂತೆ ಇತ್ತು ಎಂದು ಪ್ರಾಚಾರ್ಯ ಡಾ.ಭೀಮರಾಯ ಲಿಂಗೇರಿ ತಿಳಿಸಿದರು.

    ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಮಹಾರಾಜರ ಆಸ್ಥಾನದಲ್ಲಿ ಸೈನಿಕರಾಗಿದ್ದ ಮಡಿವಾಳ ಮಾಚಿದೇವರು ಬಸವಣ್ಣನವರ ತತ್ವ- ಸಿದ್ಧಾಂತದಿಂದ ಪ್ರಭಾವಿತರಾಗಿ ಕಲ್ಯಾಣಕ್ಕೆ ಬಂದು ನೆಲೆಸಿದರು. ಎಲ್ಲ ಜಾತಿ, ಮತಗಳು ಒಂದೇ. ನಾವೆಲ್ಲರೂ ಒಂದಾಗಿರಬೇಕು ಎಂದು ಸಾರಿದರು ಎಂದರು.

    ತುಳಿತಕ್ಕೆ ಒಳಗಾದ ಸಮಾಜವನ್ನು ತಮ್ಮ ವಚನಗಳ ಮೂಲಕ ತಿದ್ದಿದರು. 12ನೇ ಶತಮಾನದ ಕ್ರಾಂತಿಕಾರಿ ಶರಣರಾದ ಇವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರಹಿಪ್ಪರಗಿಯ ಪರ್ವತಯ್ಯ ಮತ್ತು ಸುಜ್ಞಾನಮ್ಮ ದಂಪತಿಗೆ 1120-30ರ ಸುಮಾರಿನಲ್ಲಿ ಜನಿಸಿದರು ಎಂಬುದಾಗಿ ಇತಿಹಾಸದಿಂದ ತಿಳಿದುಬರುತ್ತದೆ ಎಂದು ಹೇಳಿದರು.

    ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಮಾತನಾಡಿ, 12ನೇ ಶತಮಾನದಲ್ಲಿ ಶರಣರು ನಡೆಸಿದ ವಚನ ಚಳವಳಿಯು ಇಡೀ ದೇಶವೇ ಕರ್ನಾಟಕದತ್ತ ನೋಡುವಂತೆ ಮಾಡಿತು. ಮಡಿವಾಳ ಮಾಚಿದೇವರು ಶರಣರ ಬಟ್ಟೆಗಳನ್ನು ಮಡಿ ಮಾಡುವ ಕಾರ್ಯ ಬಹಳ ನಿಷ್ಠೆಯಿಂದ ಮಾಡುತ್ತಿದ್ದರು. ಕಾರ್ಯ ಯಾವುದಾದರೇನು ಮನಸ್ಸು ಶುದ್ಧವಾಗಿಟ್ಟುಕೊಂಡು ಎಲ್ಲರೂ ತಮ್ಮ ಕಾಯಕ ಮಾಡುತ್ತಿರಬೇಕು ಎಂದು ಹೇಳಿದ ಮಾಚಿದೇವರ ಕಾಯಕ ನಿಷ್ಠೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಅಂದಾಗ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.

    ಶಾಸಕ ವೆಂಕಟೆಡ್ಡಿ ಮುದ್ನಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಮಾಜಿ ಅಧ್ಯಕ್ಷ ಬಸರೆಡ್ಡಿಗೌಡ ಪಾಟೀಲ್ ಅನಪೂರ, ಜಯಂತಿ ಸಮಿತಿಯ ಅಧ್ಯಕ್ಷ ಮಡಿವಾಳಪ್ಪ ಬಿಜಾಸ್ಪೂರ, ಮಹಾದೇವಪ್ಪ ಯಲಸತ್ತಿ, ನಗರಸಭೆಯ ಸದಸ್ಯ ಸ್ವಾಮಿದೇವ ದಾಸನಕೇರಿ ಇದ್ದರು.
    ಚಂದ್ರಶೇಖರ ಗೋಗಿ ಮತ್ತು ತಂಡದವರು ಪ್ರಾರ್ಥಿಸಿದರು. ದತ್ತಪ್ಪ ಸಾಗನೂರ ಸ್ವಾಗತಿಸಿದರು. ಗುರುಪ್ರಸಾದ ವೈದ್ಯ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts