

ಕುಂದಾಪುರ: ನಗರದ ಬಹುತೇಕ ಮಕ್ಕಳಿಗೆ ಅಕ್ಕಿಯಿಂದ ಅನ್ನವಾಗುತ್ತದೆ ಎಂಬ ಸಾವಾನ್ಯ ಅರಿವು ಇರುವುದಿಲ್ಲ. ಆಧುನಿಕತೆಯ ಹೊಸ್ತಿಲನ್ನು ದಾಟಿರುವ ನಮ್ಮ ಮುಂದಿನ ಪೀಳಿಗೆಗೆ ಕೃಷಿ ಚಟುವಟಿಕೆಗಳ ಬಗ್ಗೆ ಪಠ್ಯ, ಪ್ರಾಯೋಗಿಕ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ವಾಹಿತಿ ನೀಡುತ್ತೇವೆ. ಮಣ್ಣಿನಲ್ಲಿ ಆಡುವ ಆಟಗಳಿಗೆ ಉತ್ತೇಜನ ನೀಡಿ, ಮಕ್ಕಳ ಕ್ರೀಯಾಶೀಲತೆ ಬೆಳೆಸುವ ಪ್ರಯತ್ನವಾಗಿದೆ ಎಂದು ಪ್ರಾಂಶುಪಾಲೆ ರೂಪಾ ಶೆಣೈ ಹೇಳಿದರು. ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಗೆ ಬಾಂಡ್ಯದ ಗದ್ದೆಯಲ್ಲಿ ಭಾನುವಾರ ನಡೆದ ಸಾಂಪ್ರದಾಯಿಕ ನೇಜಿ ನಾಟಿ ಕಾರ್ಯಕ್ರಮದಲ್ಲಿ ಮಾತನಾಡಿದರು. 140ಕ್ಕೂ ಅಧಿಕ ವಿದ್ಯಾರ್ಥಿಗಳು ಗದ್ದೆಗಿಳಿದು ನೇಜಿ ನೆಟ್ಟು ಖುಷಿಪಟ್ಟರು. ಬಳಿಕ ಕೆಸರು ಗದ್ದೆಯಲ್ಲಿ ವಿವಿಧ ಆಟಗಳನ್ನು ಆಡಿ ಸಂಭ್ರಮಿಸಿದರು. ಸಂಸ್ಥೆ ಜಂಟಿ ಕಾರ್ಯನಿರ್ವಾಹಕ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪವಾ ಎಸ್.ಶೆಟ್ಟಿ ಸಾಂಪ್ರದಾಯಿಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು. ವಿಶ್ವಸ್ಥ ಮಂಡಳಿ ಸದಸ್ಯ ರಾಜೇಶ್ ಕೆ.ಸಿ., ತಾ.ಪಂ. ವಾಜಿ ಸದಸ್ಯ ದೇವದಾಸ ಶೆಟ್ಟಿ ಆಜ್ರಿ, ಶಿಕ್ಷಕ ವೃಂದ, ಸಿಬ್ಬಂದಿ ಉಪಸ್ಥಿತರಿದ್ದರು.
ಗುರುಕುಲ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಯೊಂದಿಗೆ ಕೃಷಿ, ಜೀವನಾನುಭವ ಕಲಿಸುವ ಉದ್ದೇಶದಿಂದ, ಭತ್ತ ಹೇಗೆ ಬೆಳೆಯಲಾಗುತ್ತದೆ ಎಂಬುವುದನ್ನು ಪ್ರಾಯೋಗಿಕವಾಗಿ ಕಲಿಸಲಾಗುತ್ತದೆ. ಪ್ರತಿ ವರ್ಷವೂ ಮಕ್ಕಳು ಈ ದಿನಕ್ಕಾಗಿ ಕಾದು ಸಂಭ್ರಮಿಸುತ್ತಾರೆ. ಅನುಪವಾ ಎಸ್.ಶೆಟ್ಟಿ, ಜಂಟಿ ಕಾರ್ಯನಿರ್ವಾಹಕ ನಿರ್ದೇಶಕಿ, ಬಾಂಡ್ಯ ಎಜುಕೇಶನಲ್ ಟ್ರಸ್ಟ್