ವಿಶ್ವವಿದ್ಯಾಲಯ ಒಂದರಲ್ಲಿ ಗುಂಡಿನ ದಾಳಿ; 15 ಮಂದಿ ಸಾವು

ShootOut
Published on

ನವದೆಹಲಿ: ಪ್ರೇಗ್‌ನ ಚಾರ್ಲ್ಸ್​​ ವಿಶ್ವವಿದ್ಯಾಲಯದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಜೆಕ್ ಪೊಲೀಸರು, ಜನ್ ಪಲಾಚ್ ಚೌಕ್​ನಲ್ಲಿರುವ ಚಾರ್ಲ್ಸ್ ವಿಶ್ವವಿದ್ಯಾಲಯದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಬಂದೂಕುಧಾರಿ ಕಟ್ಟಡದಲ್ಲೇ ಇದ್ದಾನೆ. ಯಾರು ಕೂಡ ತಮ್ಮ ಕೊಠಡಿಯಿಂದ ಹೊರಬರಬೇಡಿ ಎಂದು ಕಲಾ ವಿಭಾಗದ ಭೋದಕರಿಗೆ ಇಮೇಲ್​ ರವಾನೆಯಾಗಿತ್ತು.

ಬಂದೂಕುಧಾರಿ ಮೊದಲಿಗೆ ತನ್ನ ತಂದೆಯನ್ನು ಕೊಲೆ ಮಾಡಿದ್ದು, ಬಳಿಕ ವಿಶ್ವವಿದ್ಯಾಲಯದಲ್ಲಿ15 ಮಂದಿಯನ್ನು ಹತ್ಯೆ ಮಾಡಿದ್ದಾನೆ. ಆರೋಪಿ ಗುಂಡು ಹಾರಿಸಿಕೊಂಡು ಸತ್ತಿದ್ದಾನ ಅಥವಾ ಆತನನ್ನು ಅಧಿಕಾರಿಗಳು ಹತ್ಯೆ ಮಾಡಿದ್ದಾರ ಎಂಬುದರ ಬಗ್ಗೆ ತಿಳಿಯಬೇಕಿದೆ. ವಿಶ್ವವಿದ್ಯಾಲಯದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮೂಲಕ ಜೆಕ್ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net