More

    ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ಪ್ರಹ್ಲಾದ್ ಜೋಶಿ

    ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ, ಛತ್ತೀಸ್​​ಘಡ್​ ಹಾಗೂ ಮಧ್ಯಪ್ರದೇಶದಕ್ಲಿ ಬಿಜೆಪಿ ಬಹುಮತ ಪಡೆದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಪಕ್ಕಾ ಆಗಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್​​ ಬಹುಮತ ಪಡೆದಿದ್ದು, ಉಳಿದ ಮೂರು ರಾಜ್ಯಗಳಲ್ಲಿ ಹೀನಾಯವಾಗಿ ಸೋಲುವ ಹಂತ ತಲುಪಿದೆ.

    ಕೇಂದ್ರ ಸಚಿವ ಹಾಗೂ ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಜನರು ಬಿಜೆಪಿ, ಸಕಾರಾತ್ಮಕ ಬದ್ಧತೆ ಮತ್ತು ಪ್ರಧಾನಿ ಮೋದಿ ನಾಯಕತ್ವಕ್ಕೆ ಮತ ಹಾಕಿದ್ದಾರೆ. ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.

    ಕಾಂಗ್ರೆಸ್ ಪಕ್ಷ ಯಾವಾಗಲೂ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಕರ್ನಾಟಕ, ಹಿಮಾಚಲದಲ್ಲಿ ಜನರು ಅದನ್ನು ನೋಡಿದ್ದಾರೆ. ಹಾಗಾಗಿ ಅವರು ವಿಫಲರಾಗಿದ್ದಾರೆ. ಆದ್ದರಿಂದ ಅವರನ್ನು ತಿರಸ್ಕರಿಸಲಾಗಿದೆ. ನನಗೆ ತುಂಬಾ ಸಂತೋಷವಾಗಿದೆ. ನಾವು ರಾಜಸ್ಥಾನದಲ್ಲಿ ಕನಿಷ್ಠ 124 (ಸೀಟುಗಳು) ದಾಟುತ್ತೇವೆ ಎಂದು ಹೇಳಿತ್ತಾ ತಮ್ಮ ಪಕ್ಷ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸುವ ಮೂಲಕವಾಗಿ ಗೆಲುವಿನ ನಗೆ ಬೀರಿದ್ದಾರೆ.

    ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts