More

    ಮಾಫಿಯಾದಲ್ಲೊಂದು ರೊಮ್ಯಾಂಟಿಕ್ ಸಾಂಗ್ ; ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ನಟಿಸುತ್ತಿರುವ ಕ್ರೈಂ ಥ್ರಿಲ್ಲರ್

    ವಿಜಯವಾಣಿ ಸುದ್ದಿಜಾಲ ಬೆಂಗಳೂರು

    ‘ದೇವಕಿ’, ‘ಮಮ್ಮಿ’ಯಂತಹ ಹಾರರ್ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್ ಆ್ಯಕ್ಷನ್-ಕಟ್ ಹೇಳುತ್ತಿರುವ ಮೊದಲ ಕ್ರೈಂ ಥ್ರಿಲ್ಲರ್ ‘ಮಾಫಿಯಾ’. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿದ್ದು, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿವೆ. ಅದರ ನಡುವೆಯೇ ಚಿತ್ರತಂಡ ಬುಧವಾರ (ಜ. 3) ‘ತುಂಬಾನೇ ಕೇಳಲಾರೆ ಹಿಂದೆ ಬಿದ್ದು’ ಎಂದು ಸಾಗುವ ಮೊದಲ ಹಾಡು ಬಿಡುಗಡೆ ಮಾಡಿದೆ.

    ಇದನ್ನೂ ಓದಿ : ದೊಡ್ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ರಾ ಡ್ರೋನ್​ ಪ್ರತಾಪ್​? ಅಸಲಿ ಸಂಗತಿ ಏನು? ಇಲ್ಲಿದೆ ಸ್ಪಷ್ಟನೆ…

    ‘ಇದು ನಾಯಕ, ನಾಯಕಿಯ ನಡುವಿನ ರೊಮ್ಯಾಂಟಿಕ್ ಸಾಂಗ್. ಬೆಂಗಳೂರಿನ ರಸ್ತೆಗಳಲ್ಲಿ, ದೇವಸ್ಥಾನ, ಮಾಲ್‌ಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಪ್ರಮೋದ್ ಮರವಂತೆ ಸಾಹಿತ್ಯ, ಅನೂಪ್ ಸೀಳಿನ್ ಸಂಗೀತ, ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಮೂಡಿಬಂದಿದೆ. ಹಾಡಿಗೆ ಉತ್ತಮ ರೆಸ್ಪಾನ್ಸ್ ದೊರೆಯುತ್ತಿದೆ’ ಎಂದು ಸಂತಸ ಹಂಚಿಕೊಳ್ಳುತ್ತಾರೆ ನಿರ್ದೇಶಕ ಲೋಹಿತ್. ಪ್ರಜ್ವಲ್, ಅದಿತಿ ಜತೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ಕಡ್ಡಿಪುಡಿ ಚಂದ್ರು, ಕರಿಸುಬ್ಬು ಪ್ರಮುಖ ತಾರಾಗಣದಲ್ಲಿದ್ದಾರೆ. ಫೆಬ್ರವರಿಯಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆ ಚಿತ್ರತಂಡದ್ದು.

    ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್‌ ಹೊಸ ಸಿನಿಮಾ ‘ಟಾಕ್ಸಿಕ್‌’ನಲ್ಲಿ ಬಾಲಿವುಡ್ ಬೆಡಗಿ ಕರೀನಾ ಕಪೂರ್?

    ಮಾಫಿಯಾದಲ್ಲೊಂದು ರೊಮ್ಯಾಂಟಿಕ್ ಸಾಂಗ್ ; ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ನಟಿಸುತ್ತಿರುವ ಕ್ರೈಂ ಥ್ರಿಲ್ಲರ್

    ‘ಮಾಫಿಯಾ’ ಸಿನಿಮಾ ಕೂಡ ‘ಕಾಟೇರ’ದಂತೆಯೇ ಕಂಟೆಂಟ್ ಓರಿಯಂಟೆಡ್ ಕಮರ್ಷಿಲ್ ಚಿತ್ರ. ಆ ಚಿತ್ರಕ್ಕೆ ಡೈಲಾಗ್ಸ್ ಬರೆದಿರುವ ಮಾಸ್ತಿಯವರೇ ನಮ್ಮ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ನಾನು ಮೊದಲ ಬಾರಿಗೆ ಕ್ರೈಂ ಥ್ರಿಲ್ಲರ್ ಜಾನರ್ ಪ್ರಯತ್ನಿಸಿದ್ದೇನೆ. 55 ದಿನಗಳ ಕಾಲ ಬೆಂಗಳೂರು ಹಾಗೂ ಹೈದರಾಬಾದ್‌ನ ಫಿಲಂ ಸಿಟಿಯಲ್ಲಿ ಶೂಟಿಂಗ್ ನಡೆಸಿದ್ದೇವೆ. – ಲೋಹಿತ್, ನಿರ್ದೇಶಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts