More

    ಪ್ರಜ್ವಲ್ ಪ್ಯಾನ್ ಇಂಡಿಯಾ ಜಾತರೆ; ಮೊದಲ ಬಾರಿಗೆ ಪಂಚ ಭಾಷೆಗಳಲ್ಲಿ ಡೈನಾಮಿಕ್ ಪ್ರಿನ್ಸ್ ನಟನೆ

    ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ಚೊಚ್ಚಲ ಪ್ಯಾನ್ ಇಂಡಿಯಾ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗಷ್ಟೆ ಅವರು ನಟಿಸಲಿರುವ ಪಂಚಭಾಷಾ ಸಿನಿಮಾ ಶೀರ್ಷಿಕೆ ಅನಾವರಣ ಮಾಡಲಾಗಿದೆ. ಚಿತ್ರಕ್ಕೆ ‘ಜಾತರೆ’ ಎಂದು ಹೆಸರಿಡಲಾಗಿದೆ.

    ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಮೂಡಿಬರಲಿರುವ ಈ ಚಿತ್ರಕ್ಕೆ ತೆಲುಗಿನ ಉದಯ ನಂದನವನಂ ಆ್ಯಕ್ಷನ್ ಕಟ್ ಹೇಳಲಿದ್ದಾರೆ. 2015ರಲ್ಲಿ ತೆರೆಗೆ ಬಂದ ‘ಶಂಕರಾಭರಣಂ’ ನಿರ್ದೇಶಿಸಿದ್ದ ಉದಯ ನಂದನವನಂ ಅವರಿಗೆ ಇದು ಮೊದಲ ಪ್ಯಾನ್ ಇಂಡಿಯಾ ಪ್ರಾಜೆಕ್ಟ್. ಪ್ರೀತಿ, ಫ್ಯಾಮಿಲಿ ಸೆಂಟಿಮೆಂಟ್ ಕಥಾಹಂದರ ಇರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಇದೇ ಮೊದಲ ಬಾರಿಗೆ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೈದರಾಬಾದ್‌ನ ವರ್ಧಮಾನ್ ಫಿಲಂಸ್ ಬ್ಯಾನರ್‌ನಲ್ಲಿ ಗೋವರ್ಧನ್ ರೆಡ್ಡಿ ಹಾಗೂ ಲೋಟಸ್ ಎಂಟರ್‌ಟೇನ್ಮೆಂಟ್ ಜಂಟಿಯಾಗಿ ಈ ಬಿಗ್ ಬಜೆಟ್ ಸಿನಿಮಾ ನಿರ್ಮಿಸಲಿದ್ದಾರೆ.

    ಆಗಸ್ಟ್‌ನಲ್ಲಿ ಸಿನಿಮಾ ಶೂಟಿಂಗ್ ಪ್ರಾರಂಭಿಸಿ, 2024ರ ಜನವರಿಯಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಚಿತ್ರ ಬಿಡುಗಡೆ ಮಾಡುವ ಪ್ಲ್ಯಾನ್ ಚಿತ್ರತಂಡದ್ದು. ‘ಜಾತರೆ’ಗೆ ಭೀಮ್ಸ್ ಸೆಸಿರೊಲಿಯೋ ಸಂಗೀತ, ಸಾಯಿ ಶ್ರೀರಾಂ ಛಾಯಾಗ್ರಹಣ, ಮಾಸ್ತಿ ಸಂಭಾಷಣೆ ಇರಲಿದೆ. ಚಿತ್ರದ ನಾಯಕಿ, ತಾರಾಗಣ ಹಾಗೂ ತಾಂತ್ರಿಕ ತಂಡದ ಆಯ್ಕೆ ಇನ್ನಷ್ಟೇ ಆಗಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts