ಪ್ರಜ್ವಲ್ ರೇವಣ್ಣ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ವದಂತಿ

Prajwal Revanna
Published on

ಮಂಗಳೂರು: ಸರಣಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣ ದುಬೈ ವಿಮಾನದಲ್ಲಿ ಭಾನುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುವ ಕುರಿತು ವದಂತಿ ಹರಡಿದೆ.
 ಕೊಲ್ಲಿ ರಾಷ್ಟ್ರದಿಂದ ಆಗಮಿಸುವ ಯಾವುದೇ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಭಾನುವಾರ ಬೆಳಗ್ಗೆ 11.05 ತನಕ ಟಿಕೆಟ್ ಬುಕ್ ಆಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕೃತ ಮೂಲ ಸ್ಪಷ್ಟನೆ ನೀಡಿದೆ.
ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಜ್ಯಾರಿಗೊಳಿಸಿದ ಲುಕ್‌ಔಟ್ ನೋಟೀಸ್ ದೇಶದ ಎಲ್ಲ ವಿಮಾನ ನಿಲ್ದಾಣಗಳಿಗೆ ತಲುಪಿರುವ ಹಿನ್ನೆಲೆಯಲ್ಲಿ ಸರಣಿ ಆರೋಪಿ ದೇಶದ ಯಾವುದೇ ವಿಮಾನ ನಿಲ್ದಾಣದಲ್ಲಿ ಇಳಿದರೂ ಕೂಡಲೇ ಬಂಧನ ಸಾಧ್ಯತೆ ಅಧಿಕ. ಆದ್ದರಿಂದ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಮರಳಲು ಮಂಗಳೂರು ವಿಮಾನ ನಿಲ್ದಾಣವನ್ನು ಆಯ್ದುಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net