More

    ಸಂಸತ್​ ಸದಸ್ಯತ್ವದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ರಾಜ್ಯ ಹೈಕೋರ್ಟ್​ ಆದೇಶ

    ಬೆಂಗಳೂರು: ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿರುವ ಆರೋಪದ ಮೇರೆಗೆ ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣರನ್ನು ಸಂಸತ್​ ಸದಸ್ಯತ್ವದಿಂದ ರಾಜ್ಯ ಹೈಕೋರ್ಟ್​ ಅನರ್ಹಗೊಳಿಸಿ ಆದೇಶಿಸಿದೆ.

    2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿದ್ದ ಅಂದಿನ ಬಿಜೆಪಿಯ ಎ.ಮಂಜು ಹಾಗೂ ಪಕ್ಷೇತರ ಅಭ್ಯರ್ಥಿ ದೇವರಾಜೇಗೌಡ ಎಂಬುವವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

    ಇದನ್ನೂ ಓದಿ: ಮಹಿಳೆಯರು ಹೆಚ್ಚು ಕುಡಿಯದಿದ್ದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಪ್ಪಿಸಬಹುದು; ಇಟಲಿ ಪ್ರಧಾನಿ ಪತಿ​ ವಿವಾದಾತ್ಮಕ ಹೇಳಿಕೆ

    ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದರು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಮೂರ್ತಿ ಕೆ.ನಟರಾಜನ್​ ಅವರಿದ್ದ ಪೀಠವು ಸಂಸತ್​ ಸದಸ್ಯತ್ವದಿಂದ ಪ್ರಜ್ವಲ್​ ರೇವಣ್ಣರನ್ನು ಅನರ್ಹಗೊಳಿಸಿ ತೀರ್ಪು ನೀಡಿದೆ. ರಾಜ್ಯ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್​ ರೇವಣ್ಣ ಪರ ವಕೀಲರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ಸಿದ್ದತೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts